ಯುವತಿ ಕಾಣೆ

ಮಂಗಳೂರು : ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪವಿತ್ರಾ (23) ಎಂಬಾಕೆ ಎ.18ರಿಂದ ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ.
ಎ.18ರಂದು ಬೆಳಗ್ಗೆ 9ಕ್ಕೆ ಕೆಲಸಕ್ಕೆಂದು ಮನೆಯಿಂದ ಹೋದವರು ಮರಳಿ ಬಂದಿಲ್ಲ. 4.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು ಕನ್ನಡ, ತುಳು, ಇಂಗ್ಲೀಷ್, ಹಿಂದಿ ಭಾಷೆಗಳನ್ನು ಇವರು ಮಾತನಾಡುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Next Story