Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅತಂತ್ರ ಸ್ಥಿತಿಯಲ್ಲಿ ಭವಿಷ್ಯದ ಮಕ್ಕಳ...

ಅತಂತ್ರ ಸ್ಥಿತಿಯಲ್ಲಿ ಭವಿಷ್ಯದ ಮಕ್ಕಳ ಶಿಕ್ಷಣ

-ಬಿ. ಶ್ರೀಪಾದ ಭಟ್-ಬಿ. ಶ್ರೀಪಾದ ಭಟ್21 April 2023 12:17 AM IST
share

ಮಾನ್ಯರೇ

‘ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ’ವು (ಎನ್ ಸಿಪಿಸಿಆರ್) ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ‘‘ರಾಜ್ಯ, ಬೋರ್ಡ್ ಅಥವಾ ಶಾಲೆಯು ಪ್ರಾಥಮಿಕ ಶಿಕ್ಷಣದಲ್ಲಿ ಅಕಾಡಮಿಕ್ ಪ್ರಾಧಿಕಾರ ಸೂಚಿಸಿರುವಂತೆ ಪಾಲಿಸಬೇಕು. ಅದರ ಹೊರತಾಗಿ ತಮ್ಮದೇ ಪಠ್ಯಕ್ರಮ (ಪಠ್ಯಸೂಚಿ ಮತ್ತು ಪಠ್ಯಪುಸ್ತಕ), ಮೌಲ್ಯ ಮಾಪನ ವಿಧಾನ ಅಳವಡಿಸಿಕೊಂಡರೆ ಅದು ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ಉಲ್ಲಂಘನೆಯಾಗುತ್ತದೆ. ಇದನ್ನು ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿ’’ ಎಂದಿದೆ. ತಮಿಳುನಾಡಿನ ಶಿಕ್ಷಣ ಉಳಿಸಿ ಸಂಘಟನೆಯು ‘‘ಇಲ್ಲಿ ಬೋರ್ಡ್, ರಾಜ್ಯ ಎಂದರೆ ರಾಜ್ಯ ಶಿಕ್ಷಣ ಇಲಾಖೆ ಪಠ್ಯಕ್ರಮ, ವ್ಯಾಸಂಗಕ್ರಮ ರೂಪಿಸುವಂತಿಲ್ಲ, ಮೌಲ್ಯಮಾಪನ ನಡೆಸುವಂತಿಲ್ಲ ಎನ್ನುವ ಅರ್ಥ ಕೊಡುತ್ತಿದೆ’’ಯೆಂದು ಆರೋಪಿಸಿದೆ. ಉನ್ನತ ಶಿಕ್ಷಣದಲ್ಲಿ ಜಾರಿಗೊಳ್ಳುತ್ತಿರುವ ಈ ಕೇಂದ್ರೀಕರಣ ನೀತಿಯನ್ನು ಶಾಲಾ ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ.

ಈಗಾಗಲೇ ಸರಕಾರಿ ಶಾಲೆಗಳಲ್ಲಿ 8ನೇ ತರಗತಿಯಿಂದ ಎನ್‌ಸಿಇಅರ್‌ಟಿ ಪಠ್ಯಕ್ರಮ ಅಳವಡಿಸಿಕೊಳ್ಳಲಾಗಿದೆ. ಈ ಆದೇಶವನ್ನು ಗಮನಿಸಿದರೆ ಈ ಕೇಂದ್ರೀಕರಣದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಹಿರಿಯ ಪ್ರಾಥಮಿಕ ಶಿಕ್ಷಣವನ್ನು ಒಳಗೊಳ್ಳಲಾಗುತ್ತದೆ

ಈ ಬೆಳವಣಿಗೆ ಕಳವಳಕಾರಿ, ಆದರೆ ನಿರೀಕ್ಷಿತ. ಸಂವಿಧಾನದ ಅನುಬಂಧ 7ರ ಅನುಸಾರ ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಶಿಕ್ಷಣದ ಕುರಿತು ರಾಜ್ಯಗಳಿಗೂ ಸಮಾನ ಅಧಿಕಾರವಿದೆ, ಹಕ್ಕುಗಳಿವೆ. ಶಾಲಾ ಶಿಕ್ಷಣದಲ್ಲಿ ತಮ್ಮದೇ ಪಠ್ಯಕ್ರಮ, ಶಿಕ್ಷಣ ನೀತಿ ರೂಪಿಸಿಕೊಳ್ಳುವುದು ರಾಜ್ಯಗಳ ಸಾಂವಿಧಾನಿಕ ಹಕ್ಕು. ಆದರೆ ರಾಜ್ಯಗಳ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸುವ ಈ ಮೇಲಿನ ಆದೇಶ ಸಂವಿಧಾನದ ನೀತಿಯನ್ನು ಉಲ್ಲಂಘಿಸುತ್ತದೆ. ಮೋದಿ-ಶಾರವರ ‘ಒಂದು ದೇಶ, ಒಂದು ಪಠ್ಯಕ್ರಮ, ಒಂದು ಮೌಲ್ಯಮಾಪನ’ ನೀತಿಯನ್ನು ಶಾಲಾ ಶಿಕ್ಷಣದಲ್ಲಿ ಜಾರಿಗೊಳಿಸುವ ತಂತ್ರ ಎನ್ನುವುದು ಸ್ಪಷ್ಟವಾಗಿದೆ.

ಒಮ್ಮೆ ಶಾಲಾ ಶಿಕ್ಷಣವು ಕೇಂದ್ರೀಕರಣಗೊಂಡರೆ ತಳ ಸಮುದಾಯದ, ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಈ ಕುರಿತು ಸಾವಿರಾರು ಬಾರಿ ಚರ್ಚೆಯಾಗಿದೆ. ಎನ್‌ಇಪಿ ಸಂದರ್ಭದಲ್ಲಿ ಈ ಕುರಿತು ಎಚ್ಚರಿಸಲಾಗಿತ್ತು. ಈಗ ನಿಜವಾಗುತ್ತಿದೆ. ಜೊತೆಗೆ 6ನೇ ತರಗತಿಯಿಂದ (12ನೇ ವಯಸ್ಸು) ವೃತ್ತಿಪರ ತರಬೇತಿ ಕೊಡಲು ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ. ಇದರ ದುಷ್ಪರಿಣಾಮ ನಮಗೆ ಗೊತ್ತಿಲ್ಲವೇ?
ಗೊತ್ತಿದ್ದೂ ನಾಗರಿಕ ಸಮಾಜದ ಮೌನ ಮತ್ತು ನಿರ್ಲಕ್ಷ ಸರ್ವಾಧಿಕಾರಿ ಧೋರಣೆಗೆ ಸುಲಭದ ಹಾದಿ ಮಾಡಿಕೊಡುತ್ತಿದೆ.
ಮುಂದಿನ ತಲೆಮಾರಿನ ಮಕ್ಕಳ ಶಿಕ್ಷಣವು ಅತಂತ್ರ ಸ್ಥಿತಿಯಲ್ಲಿದೆ.
 

share
-ಬಿ. ಶ್ರೀಪಾದ ಭಟ್
-ಬಿ. ಶ್ರೀಪಾದ ಭಟ್
Next Story
X