Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ...

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ

ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ, 2ನೇ ಸ್ಥಾನ ಉಡುಪಿ

21 April 2023 10:27 AM IST
share
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ
ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ, 2ನೇ ಸ್ಥಾನ ಉಡುಪಿ

ಬೆಂಗಳೂರು, ಎ. 21: ಪ್ರಸ್ತುತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗೆ ಹಾಜರಾಗಿದ್ದ 7,02,067 ವಿದ್ಯಾರ್ಥಿಗಳ ಪೈಕಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಇದೇ ಮೊದಲ ಬಾರಿ ಶೇ.74.67ರಷ್ಟು ದಾಖಲೆಯ ಫಲಿತಾಂಶ ಬಂದಿದೆ.

ಬೆಂಗಳೂರಿನ ಎನ್‍ಎಂಆರ್‍ಕೆವಿ ಕಾಲೇಜಿನ ವಿದ್ಯಾರ್ಥಿನಿ ತಬಸ್ಸುಮ್ ಶೇಕ್ ಕಲಾ ವಿಭಾಗದಲ್ಲಿ 600 ಅಂಕಕ್ಕೆ 593 ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ದರೆ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ಎ.ಅನನ್ಯಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳಿಸಿದ್ದಾರೆ. ಅದೇ ರೀತಿ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗಂಗೋತ್ರಿ ಪಿಯು ಕಾಲೇಜಿನ ವಿದ್ಯಾರ್ಥಿ ಎಸ್.ಎಂ.ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 596 ಹಾಗೂ ಬೆಂಗಳೂರಿನ ಜಯನಗರದ ಆರ್‍ವಿ ಪಿಯು ಕಾಲೇಜು ಎನ್‍ಎಂಕೆಆರ್‍ವಿ ವಿದ್ಯಾರ್ಥಿನಿ ಸುರಭಿ ಎಸ್. 596 ಅಂಕ ಗಳಿಸುವ ಮೂಲಕ ಸಾಧನೆ ಗೈದಿದ್ದಾರೆ.

ಶುಕ್ರವಾರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಹಾಗೂ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಫಲಿತಾಂಶ ಪ್ರಕಟಿಸಿದ್ದು, ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 7,02,067 ವಿದ್ಯಾರ್ಥಿಗಳಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.74.67 ರಷ್ಟು ಫಲಿತಾಂಶ ಬಂದಿದೆ. ಅದರಲ್ಲೂ ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಯಾದಗಿರಿಗೆ ಕಡೆಯ ಸ್ಥಾನ ಬಂದಿದೆ. ಒಟ್ಟಾರೆ, ಕಳೆದ ಬಾರಿಗಿಂತ ಈ ಬಾರಿ ಶೇ.12.79 ರಷ್ಟು ಹೆಚ್ಚು ಫಲಿತಾಂಶ ಬಂದಿದೆ ಎಂದರು.

ಕಲಾ ವಿಭಾಗದಲ್ಲಿ ಶೇ.61.22 ವಾಣಿಜ್ಯ ವಿಭಾಗದಲ್ಲಿ ಶೇ.75.89 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.85.71 ರಷ್ಟು ಫಲಿತಾಂಶ ಬಂದಿದೆ. 3,49,901 ಬಾಲಕರು ಪರೀಕ್ಷೆ ಬರೆದಿದ್ದು ಇದರಲ್ಲಿ 2,41,607 ಬಾಲಕರು ತೇರ್ಗಡೆಯಾಗಿದ್ದಾರೆ. ಅಂದರೆ, ಶೇ.69.05 ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ಅದೇ ರೀತಿ, 3,52,166 ಬಾಲಕಿಯರು ಪರೀಕ್ಷೆ ಬರೆದಿದ್ದು, ಈ ಪೈಕಿ 2,82,602 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದು, ಶೇ. 80.25 ರಷ್ಟು ಫಲಿತಾಂಶ ಬಂದಿದೆ ಎಂದು ವಿವರಿಸಿದರು.

ಸರಕಾರಿ ಪಿಯು ಕಾಲೇಜಿನಲ್ಲಿ 42 ಕಾಲೇಜು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಯಾವುದೇ ಕಾಲೇಜು ಶೂನ್ಯ ಫಲಿತಾಂಶ ಪಡೆದುಕೊಂಡಿಲ್ಲ. ಅನುದಾನಿತ ಪಿಯು ಕಾಲೇಜಿನಲ್ಲಿ 10 ಶೇ. 100 ರಷ್ಟು ಫಲಿತಾಂಶ 5 ಶೂನ್ಯ ಫಲಿತಾಂಶ, ಅನುದಾನ ರಹಿತ ಪಿಯು ಕಾಲೇಜಿನಲ್ಲಿ 264 ಕಾಲೇಜು ಶೇ.100 ಫಲಿತಾಂಶ, 73 ಕಾಲೇಜು ಶೂನ್ಯ ಫಲಿತಾಂಶ ಪಡೆದುಕೊಂಡಿವೆ ಎಂದು ತಿಳಿಸಿದರು.

1,09,509 ವಿದ್ಯಾರ್ಥಿಗಳು ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದರೆ, 2,47,315 ವಿದ್ಯಾರ್ಥಿಗಳು ಶೇ.60, 90,014 ವಿದ್ಯಾರ್ಥಿಗಳು ಶೇ.50, 77,371 ವಿದ್ಯಾರ್ಥಿಗಳು ಶೇ.35 ಕ್ಕಿಂತ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಉತ್ತೀರ್ಣ ಹಂತದಲ್ಲಿ ಅನುತ್ತೀರ್ಣ ಆಗಿರುವ 15 ಸಾವಿರ ಮಕ್ಕಳಿಗೆ ಎರಡು ವಿಷಯಗಳಿಗೆ ತಲಾ ಐದು ಅಂಕದ ಗ್ರೇಸ್ ಮಾಕ್ರ್ಸ್ ಕೊಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ..!: ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶದಲ್ಲಿ 5,41,807 ವಿದ್ಯಾರ್ಥಿಗಳಲ್ಲಿ 4,04,349 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.74.63 ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ 1,60,860 ವಿದ್ಯಾರ್ಥಿಗಳಲ್ಲಿ 1,19,860 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.74.79 ರಷ್ಟು ಫಲಿತಾಂಶ ಬಂದಿದೆ.

ಒಟ್ಟು ಪರೀಕ್ಷೆ ಬರೆದವರು-7,02,067

ಉತ್ತೀರ್ಣರಾದವರು-5,24,209.

ಬಾಲಕರು-2,41,607

ಬಾಲಕಿಯರು-2,82,602

ಒಟ್ಟು ಶೇಕಡಾ ಫಲಿತಾಂಶ-ಶೇ.74.67

ಗ್ರೇಸ್ ಅಂಕ ಪಡೆದ ವಿದ್ಯಾರ್ಥಿಗಳು..!:

‘ಈ ಬಾರಿ ಶೇ.5ರಷ್ಟು ಅಂಕ ಗ್ರೇಸ್ ರೂಪದಲ್ಲಿ 15 ಸಾವಿರ ವಿದ್ಯಾರ್ಥಿಗಳಿಗೆ ನೀಡಲಾಗಿದ್ದು, ಅದೇ ರೀತಿ, ರಸಾಯನಶಾಸ್ತ್ರದಲ್ಲಿ ಪ್ರಶ್ನೆಗಳಲ್ಲಿ ಲೋಪವಿದ್ದ ಹಿನ್ನೆಲೆ 5 ಅಂಕಗಳನ್ನು ನೀಡಲಾಗಿದೆ.ಹಾಗೇ,ಇದೇ ಮೊಟ್ಟ ಮೊದಲ ಬಾರಿ ಮರು ಮೌಲ್ಯಮಾಪನದಲ್ಲಿ 1 ಅಂಕ ಗಳಿಸಿದ ಅಥವಾ ಕಡಿಮೆ ಆದರು ಅದನ್ನು ಅಂಕ ಪಟ್ಟಿಯಲ್ಲಿ ಸೇರಿಸಲು ತೀರ್ಮಾನಿಸಲಾಗಿದೆ.

ಯಾವ ಜಿಲ್ಲೆ, ಎಷ್ಟು ಫಲಿತಾಂಶ(ಶೇಕಡವಾರು)

-ದಕ್ಷಿಣ ಕನ್ನಡ-ಶೇ.95.33 
-ಉಡುಪಿ-ಶೇ.95.24
-ಕೊಡಗು-ಶೇ.90.55
-ಉತ್ತರ ಕನ್ನಡ-ಶೇ.89.74
-ವಿಜಯಪುರ-ಶೇ.84.69
-ಚಿಕ್ಕಮಗಳೂರು-ಶೇ.83.28
-ಹಾಸನ-ಶೇ.83.14
-ಶಿವಮೊಗ್ಗ-ಶೇ.83.13
-ಬೆಂಗಳೂರು ಗ್ರಾ.-ಶೇ.83.04
-ಬೆಂಗಳೂರುದಕ್ಷಿಣ-ಶೇ.82.3
-ಬೆಂಗಳೂರು ಉತ್ತರ-ಶೇ.82.25
-ಚಾಮರಾಜನಗರ-ಶೇ.81.92
-ಮೈಸೂರು-ಶೇ.73.89
-ಕೋಲಾರ-ಶೇ.79.2
-ಬಾಗಲಕೋಟೆ-ಶೇ.78.79
-ಚಿಕ್ಕೋಡಿ-ಶೇ.78.76
-ರಾಮನಗರ-ಶೇ.78.12
-ಬೀದರ್-ಶೇ.78
-ಚಿಕ್ಕಬಳ್ಳಾಪುರ-ಶೇ.77.77
-ಮಂಡ್ಯ-ಶೇ. 77.47
-ದಾವಣಗೆರೆ-ಶೇ.75.72
-ಕೊಪ್ಪಳ-ಶೇ.74.8
-ತುಮಕೂರು-ಶೇ.74.5
-ಹಾವೇರಿ-ಶೇ.74.13
-ಬೆಳಗಾವಿ-ಶೇ.73.98
-ಧಾರವಾಡ-ಶೇ.73.54
-ಬಳ್ಳಾರಿ-ಶೇ.69.55
-ಚಿತ್ರದುರ್ಗ-ಶೇ.69.5
-ಕಲಬುರ್ಗಿ-ಶೇ.69.37
-ಗದಗ-ಶೇ.66.91
-ರಾಯಚೂರು-ಶೇ.66.21
-ಯಾದಗಿರಿ-ಶೇ.62.98

ಮರು ಮೌಲ್ಯಮಾಪನಕ್ಕೆ ಅವಕಾಶ:

ಇಂದಿನಿಂದಲೇ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಎ.27 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಎ.26ರಿಂದ ಮೇ 2ರ ವರೆಗೆ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಡೌನ್ ಮಾಡಿಕೊಳ್ಳಬಹುದಾಗಿದೆ. ಇದನ್ನು ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ನಿಗದಿಪಡಿಸಿದ್ದು, ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ಮೇ 3 ರಿಂದ 8ರ ವರೆಗೆ ಅವಕಾಶವಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸುವುದು ಹೇಗೆ?

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ www.karresults.nic.in ಅಥವಾ https://kseab.karnataka.gov.in/ ಗೆ ಭೇಟಿ ನೀಡಿ.

ಓಪನ್‌ ಆದ ಪೇಜ್‌ನಲ್ಲಿ 2nd ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
ಆಗ ನಿಮಗೆ ಇನ್ನೊಂದು ಪೇಜ್‌ ಓಪನ್‌ ಆಗುತ್ತದೆ.

ಆ ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಿ.
ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿ.

ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.

ಅದನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ ತೆಗೆದುಕೊಳ್ಳಿ.

share
Next Story
X