Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಂಚಣಿ ಪಡೆಯಲು ಮುರಿದ ಕುರ್ಚಿಯ...

ಪಿಂಚಣಿ ಪಡೆಯಲು ಮುರಿದ ಕುರ್ಚಿಯ ಬೆಂಬಲದಿಂದ ಬರಿಗಾಲಿನಲ್ಲಿ ಬ್ಯಾಂಕಿಗೆ ನಡೆದುಕೊಂಡ ಹೋದ ವೃದ್ದೆ

ವೀಡಿಯೊ ವೈರಲ್

21 April 2023 11:17 AM IST
share
ಪಿಂಚಣಿ ಪಡೆಯಲು ಮುರಿದ ಕುರ್ಚಿಯ ಬೆಂಬಲದಿಂದ ಬರಿಗಾಲಿನಲ್ಲಿ ಬ್ಯಾಂಕಿಗೆ ನಡೆದುಕೊಂಡ ಹೋದ ವೃದ್ದೆ
ವೀಡಿಯೊ ವೈರಲ್

ಜರಿಗಾಂವ್(ಒಡಿಶಾ): ಒಡಿಶಾದಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದರಲ್ಲಿ  70 ವರ್ಷದ ಮಹಿಳೆಯೊಬ್ಬರು ಬ್ಯಾಂಕ್‌ನಿಂದ ಪಿಂಚಣಿ ಪಡೆಯಲು ಹಲವಾರು ಕಿಲೋಮೀಟರ್‌ಗಳವರೆಗೆ ಮುರಿದ ಕುರ್ಚಿಯ ಬೆಂಬಲದೊಂದಿಗೆ ಬರಿಗಾಲಿನಲ್ಲಿ ನಡೆದುಕೊಂಡು ಹೋಗಿರುವ ವೀಡಿಯೊವೊಂದು ವೈರಲ್ ಆಗಿದೆ.

ವೃದ್ದೆ ಮಹಿಳೆ ಮುರಿದ ಕುರ್ಚಿಯ ಬೆಂಬಲದೊಂದಿಗೆ ಸುಡುವ ಬಿಸಿಲಲ್ಲಿ ಬರಿಗಾಲಿನಲ್ಲಿ ನಡೆಯುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಂಡುಬಂದಿದೆ. ಎಪ್ರಿಲ್ 17 ರಂದು ಒಡಿಶಾದ ನಬ್ರಂಗ್‌ಪುರ ಜಿಲ್ಲೆಯ ಜರಿಗಾಂವ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ.

ತೀರಾ ಬಡತನದಲ್ಲಿರುವ ಸೂರ್ಯ ಹರಿಜನ ಎಂಬ ವೃದ್ಧೆ ಹಿರಿಯ ಮಗ ಬೇರೆ ರಾಜ್ಯದಲ್ಲಿ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಸೂರ್ಯ  ತನ್ನ ಕಿರಿಯ ಮಗನ ಕುಟುಂಬದೊಂದಿಗೆ ವಾಸವಾಗಿದ್ದು, ಕಿರಿಯ ಮಗ ಇತರ ಜನರ ದನಗಳನ್ನು ಮೇಯಿಸುತ್ತಾ ತನ್ನ ಜೀವನವನ್ನು ನಡೆಸುತ್ತಿದ್ದಾನೆ. ಉಳುಮೆ ಮಾಡಲು ಜಮೀನಿಲ್ಲದ ಈ ಕುಟುಂಬ ಗುಡಿಸಲು ಹಾಕಿಕೊಂಡು ಜೀವನ ನಡೆಸುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮ್ಯಾನೇಜರ್ ವೃದ್ದೆಯ  "ಮುರಿದ ಬೆರಳುಗಳಿಂದಾಗಿ" ಹಣವನ್ನು ಹಿಂಪಡೆಯಲು ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

"ವೃದ್ದೆಯ ಬೆರಳುಗಳು ಮುರಿದುಹೋಗಿವೆ. ವೃದ್ದೆಯ ಹೆಬ್ಬೆರಳು ದಾಖಲೆಗಳಿಗೆ ಹೊಂದಿಕೆಯಾಗುತ್ತಿಲ್ಲ. ಆದ್ದರಿಂದ ಅವರು  ಹಣವನ್ನು ಹಿಂಪಡೆಯಲು ತೊಂದರೆ ಎದುರಿಸುತ್ತಿದ್ದಾರೆ. ಆಕೆಗೆ ಬ್ಯಾಂಕ್‌ನಿಂದ ಕೈಯಾರೆ  3,000 ರೂ. ನೀಡಲಾಗಿದೆ. ನಾವು ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುತ್ತೇವೆ" ಎಂದು ಜರಿಗಾಂವ್ ಶಾಖೆಯ ಎಸ್‌ಬಿಐ ವ್ಯವಸ್ಥಾಪಕರು ತಿಳಿಸಿದ್ದಾರೆ.

#WATCH | A senior citizen, Surya Harijan walks many kilometers barefoot with the support of a broken chair to reach a bank to collect her pension in Odisha's Jharigaon

SBI manager Jharigaon branch says, "Her fingers are broken, so she is facing trouble withdrawing money. We'll… pic.twitter.com/Hf9exSd0F0

— ANI (@ANI) April 20, 2023
share
Next Story
X