ಕನಕಪುರ: ಡಿ.ಕೆ ಶಿವಕುಮಾರ್ ನಾಮಪತ್ರ ಅಂಗೀಕಾರ

ಬೆಂಗಳೂರು: ಕನಕಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಾಮಪತ್ರ ಅಂಗೀಕಾರವಾಗಿದೆ.
ಕನಕಪುರದಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿ.ಕೆ ಶಿವಕುಮಾರ್ ಅವರು ಸೋಮವಾರ ಇಲ್ಲಿನ ತಾಲೂಕು ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ್ದರು. ಬಳಿಕ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ ತಮ್ಮ ಸಹೋದರ ಡಿ.ಕೆ. ಸುರೇಶ್ ಅವರಿಂದ ನಾಮಪತ್ರ ಹಾಕಿಸಿದ್ದರು.
ಇದೀಗ ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ ಡಿ.ಕೆ ಶಿವಕುಮಾರ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ.
ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿಯಿಂದ ಕಂದಾಯ ಸಚಿವ ಆರ್ ಅಶೋಕ್ ಕಣಕ್ಕಿಳಿದಿದ್ದಾರೆ.
Next Story





