Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ರಾಮನವಮಿ ಗಲಭೆಗಳ ಕುರಿತು...

ಬಿಹಾರ ರಾಮನವಮಿ ಗಲಭೆಗಳ ಕುರಿತು ಸತ್ಯಶೋಧನಾ ವರದಿ ಬಿಡುಗಡೆಗೊಳಿಸಿದ ಎಪಿಸಿಆರ್‌

"ಗಲಭೆ ನಿಯಂತ್ರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲ"

21 April 2023 4:19 PM IST
share
ಬಿಹಾರ ರಾಮನವಮಿ ಗಲಭೆಗಳ ಕುರಿತು ಸತ್ಯಶೋಧನಾ ವರದಿ ಬಿಡುಗಡೆಗೊಳಿಸಿದ ಎಪಿಸಿಆರ್‌
"ಗಲಭೆ ನಿಯಂತ್ರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲ"

‌ಪಾಟ್ನಾ: ಈ ವರ್ಷ ನಡೆದ ರಾಮನವಮಿ ಮೆರವಣಿಗೆಗಳ ಸಂದರ್ಭ ಬಿಹಾರದ ಶರೀಫ್‌ ಮತ್ತು ಸಸಾರಾಂ ಪ್ರದೇಶಗಳಲ್ಲಿ ವ್ಯಾಪಕ ಗಲಭೆಗಳು ನಡೆದು ಮುಸ್ಲಿಮರ ಆಸ್ತಿಪಾಸ್ತಿಗಳಿಗೆ ಬೆಂಕಿಹಚ್ಚಲಾಗಿತ್ತು. ಉದ್ರಿಕ್ತರ ಗುಂಪು ಶತಮಾನದ ಇತಿಹಾಸವಿರುವ ಅಝಿಝಿಯಾ ಮದರಸಾ ಕಟ್ಟಡಕ್ಕೂ ಬೆಂಕಿ ಹಚ್ಚಿ 4500 ಪುಸ್ತಕಗಳನ್ನು ನಾಶಗೊಳಿಸಿತ್ತು ಎಂದು ವರದಿಯಾಗಿತ್ತು.

ಈ ಘಟನೆಗಳ ತನಿಖೆ ಹಾಗೂ ಸತ್ಯಶೋಧನೆಗಾಗಿ ಅಸೋಸಿಯೇಶನ್‌ ಫಾರ್‌ ಪ್ರೊಟೆಕ್ಷನ್‌ ಆಫ್ ಸಿವಿಲ್‌ ರೈಟ್ಸ್‌ ಸತ್ಯ ಶೋಧಾ ತಂಡ ಬಾಧಿತ ಸ್ಥಳಗಳಿಗೆ ಭೇಟಿ ನೀಡಿ ಗಲಭೆಯಿಂದ ಬಾಧಿತ ಕುಟುಂಬಗಳ ಸದಸ್ಯರನ್ನು ಭೇಟಿಯಾಗಿತ್ತು. ಈ ಗಲಭೆಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿತ್ತು ಹಾಗೂ ಬಜರಂಗದಳ ಕಾರ್ಯಕರ್ತರು ಪೊಲೀಸರ ಎದುರೇ ಧ್ವಜ ಹಾರಿಸಿದ್ದರೂ ಯಾರೂ ಅವರನ್ನು ತಡೆದಿರಲಿಲ್ಲ ಎಂಬ ಅಂಶವನ್ನು ಸತ್ಯಶೋಧನಾ ತನಿಖೆ ಕಂಡುಕೊಂಡಿದೆ. ಘಟನೆ ನಡೆದು ಐದಾರು ಗಂಟೆಗಳ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು ಎಂಬ ಅಂಶವೂ ಬಯಲಾಗಿದೆ.

ಗಲಭೆಯ ಸಂತ್ರಸ್ತರಿಗೆ ಹಾಗೂ ತಮ್ಮ ಜೀವನೋಪಾಯ, ಮನೆಗಳನ್ನು ಕಳೆದುಕೊಂಡವರಿಗೆ ಪರಿಹಾರ ನೀಡಬೇಕೆಂದೂ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಸತ್ಯಶೋಧನಾ ತಂಡದ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ಹಲವು ವಿಚಾರಗಳತ್ತ ಬೆಳಕು ಚೆಲ್ಲಿದರು.

ಹಿರಿಯ ಪತ್ರಕರ್ತ ಪ್ರಶಾಂತ್‌ ಟಂಡನ್‌ ಮಾತನಾಡಿ, ಬಿಹಾರದಲ್ಲಿ ನಡೆದ  ಈ ಹಿಂಸಾಚಾರ ಪೂರ್ವಯೋಜಿತ ಕೃತ್ಯವಾಗಿತ್ತು. 2018ರಲ್ಲಿ ಇದೇ ರೀತಿ ಹಿಂಸಾಚಾರ ನಡೆದಾಗ ತಕ್ಷಣ ನಿಯಂತ್ರಿಸಲಾಗಿತ್ತು ಎಂಬುದನ್ನು ಉಲ್ಲೇಖಿಸಿದರು.

ವಕೀಲ ಮೊಬಶಿರ್‌ ಅನೀಖ್‌ ಅವರು 2018ರ ವರದಿ ಮತ್ತು ಶಿಫಾರಸುಗಳನ್ನು ಉಲ್ಲೇಖಿಸಿದರಲ್ಲದೆ 2023 ರಲ್ಲಿ ಶಾಂತಿ ಸಮಿತಿ ಸೂಚನೆಗಳನ್ನು ಪಾಲಿಸಲು ಕ್ರಮಕೈಗೊಳ್ಳಲಾಗಿರಲಿಲ್ಲ ಎಂದರು. ಸ್ಥಳೀಯ ರಾಜಕಾರಣಿಗಳ ಮೌನ ಹಾಗೂ ಪೊಲೀಸರ ಪಕ್ಷಪಾತದ ಕ್ರಮವನ್ನೂ ಅವರು ಪ್ರಶ್ನಿಸಿದರು.

ಪತ್ರಕರ್ತೆ ಶಾ ಸಿಂಗ್ ಮಾತನಾಡಿ, "ಹಿಂಸಾಚಾರ ಪೂರ್ವಯೋಜಿತವಾಗಿತ್ತು ಹಾಗೂ ರಾಜಕಾರಣಿಗಳು ಸಹಿತ ಇದರ ಹಿಂದಿರುವವರನ್ನು ಜವಾಬ್ದಾರರನ್ನಾಗಿಸಬೇಕು" ಎಂದು ಹೇಳಿದರು.

ಪ್ರೊ. ಅಪೂರ್ವಾನಂದ ಮಾತನಾಡಿ, ಬಿಹಾರದಲ್ಲಿ ರಾಮ ನವಮಿ ಮೆರವಣಿಗೆಗಳನ್ನು ಮುಸ್ಲಿಮರ ವಿರುದ್ಧ ಹಿಂಸೆ ಉದ್ದೇಶಕ್ಕಾಗಿ ಬಳಸಲಾಗುತ್ತದೆ ಎಂದರು.

ಹಿರಿಯ ಪತ್ರಕರ್ತ ಊರ್ಮಿಳೇಶ್‌ ಮತ್ತು ಹಿರಿಯ ವಕೀಲ ಸಂಜಯ್‌ ಹೆಗ್ಡೆ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಹಾರದಲ್ಲಿ ರಾಮನವಮಿ ಸಂದರ್ಭ ನಡೆದ ʻಪೂರ್ವಯೋಜಿತʼ ಹಿಂಸಾಚಾರದ ಬಗ್ಗೆ ಸತ್ಯಶೋಧನಾ ತಂಡದ ಎಲ್ಲಾ ಸದಸ್ಯರು ಕಳವಳ ವ್ಯಕ್ತಪಡಿಸಿ, ಈ ರೀತಿಯ ಹಿಂಸೆಯನ್ನು ಭವಿಷ್ಯದಲ್ಲಿ ತಡೆಯುವ ಮತ್ತು ಜಾತ್ಯತೀತತೆಯನ್ನು ಉತ್ತೇಜಿಸುವ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

share
Next Story
X