Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಂದಾಪುರ: ಟ್ಯೂಷನ್‌ಗೆ ಹೋಗದೆ...

ಕುಂದಾಪುರ: ಟ್ಯೂಷನ್‌ಗೆ ಹೋಗದೆ ರಾಜ್ಯಕ್ಕೆ ಟಾಪರ್ ಆದ ನೇಹಾ ರಾವ್

21 April 2023 5:13 PM IST
share
ಕುಂದಾಪುರ: ಟ್ಯೂಷನ್‌ಗೆ ಹೋಗದೆ ರಾಜ್ಯಕ್ಕೆ ಟಾಪರ್ ಆದ ನೇಹಾ ರಾವ್

ಕುಂದಾಪುರ, ಎ.21: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೇಹಾ ಜೆ.ರಾವ್ 594ಅಂಕಗಳನ್ನು ಪಡೆದಕೊಳ್ಳುವ ಮೂಲಕ ರಾಜ್ಯಕ್ಕೆ 3ನೇ ಸ್ಥಾನ ಪಡೆದುಕೊಂಡಿದ್ದಾರೆ.

ಒಟ್ಟು 600 ಅಂಕಗಳಲ್ಲಿ 594ಅಂಕಗಳನ್ನು ಪಡೆದುಕೊಂಡಿರುವ ಇವರು ಸಂಸ್ಕೃತ, ಕಂಪ್ಯೂಟರ್‌ನಲ್ಲಿ 100, ರಸಾಯನಶಾಸ್ತ್ರ, ಗಣಿತದಲ್ಲಿ 99, ಇಂಗ್ಲಿಷ್, ಭೌತಶಾಸ್ತ್ರದಲ್ಲಿ 98 ಅಂಕಗಳನ್ನು ಗಳಿಸಿದ್ದಾರೆ.

ಕುಂದಾಪುರ ನಗರದ ಮುಖ್ಯ ರಸ್ತೆಯಲ್ಲಿ ಆಶೀರ್ವಾದ ಚಿನ್ನದ ಆಭರಣ ತಯಾರಿಕಾ ಮಳಿಗೆ ಹೊಂದಿರುವ ಕುಂದಾಪುರ ಬಸ್ರೂರು ಮೂರುಕೈ  ನಿವಾಸಿ ಜಗದೀಶ್ ರಾವ್ ಎಚ್. ಹಾಗೂ ಸ್ಮೀತಾ ದಂಪತಿಯ ಇಬ್ಬರು ಮಕ್ಕಳಲ್ಲಿ ನೇಹಾ ಮೊದಲನೇಯವರು. ಅವರಿಗೆ ಒಬ್ಬ ಕಿರಿಯ ಸಹೋದರ ಇದ್ದಾರೆ. ಎಲ್.ಕೆ.ಜಿ ಯಿಂದ ಪದವಿ ಪೂರ್ವದವರೆಗಿನ ಶಿಕ್ಷಣವನ್ನು ಅವರು ನಗರದ ಶ್ರೀ ವೆಂಕಟ ರಮಣ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿಯೇ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ನೇಹಾ, ಪರೀಕ್ಷೆ ತುಂಬಾ ಸುಲಭವಾಗಿದ್ದರಿಂದ ಒಳ್ಳೆಯ ಅಂಕಗಳು ಬರುವ ನಿರೀಕ್ಷೆ ಇತ್ತು. ಆದರೆ ರಾಜ್ಯಕ್ಕೆ ರ್ಯಾಂಕ್ ಬರುತ್ತೆ ಎಂದುಕೊಂಡಿರಲಿಲ್ಲ. ಮೂರನೇಯ ರ್ಯಾಂಕ್ ಬಂದಿರುವುದು ತುಂಬಾ ಖುಷಿಯಾಗಿದೆ. ಇದಕ್ಕೆಲ್ಲ ಕಾರಣ ನಮ್ಮ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು. ದಿನನಿತ್ಯ ಬೆಳಿಗ್ಗೆ ಐದು ಗಂಟೆಗೆ ಎದ್ದು ಓದುವ ಪರಿಪಾಠ ಬೆಳೆಸಿಕೊಂಡಿದ್ದೆ. ಮತ್ತೆ ಸಂಜೆ ಮನೆಗೆ ವಾಪಾಸಾಗಿ ದಿನನಿತ್ಯದ ಪಾಠಗಳನ್ನು ಆಯಾಯ ದಿನಗಳಲ್ಲಿ ಓದುತ್ತಿದ್ದೆ. ಪರೀಕ್ಷಾ ಅವಧಿಯಲ್ಲಿ ವೇಳಾಪಟ್ಟಿ ತಯಾರಿಸಿ ಅದರಂತೆಯೇ ಓದುವ ಪರಿಪಾಠವನ್ನು ಬೆಳೆಸಿಕೊಂಡಿದ್ದೆ ಎಂದರು.

‘ಯಾವುದೇ ಟ್ಯೂಷನ್‌ಗೆ ಹೋಗಿರಲಿಲ್ಲ. ಕಾಲೇಜಿನ ಪಾಠ, ಪ್ರವಚನ ಹಾಗೂ ಕೋಚಿಂಗ್ ತರಗತಿಯ ತರಬೇತಿ ನನಗೆ ಅಂಕವನ್ನು ಪಡೆದು ಕೊಳ್ಳಲು ಸಹಾಯವಾಗಿದೆ. ನನಗೆ ಮುಂದೆ ಸಾಫ್ಟ್‌ವೇರ್ ಇಂಜಿನಿಯರ್ ಆಗಬೇಕು ಎಂಬ ಆಸೆ ಇದೆ ಎಂದು ಅವರು ತಿಳಿಸಿದರು.

‘ನೇಹಾ ಸಾಧನೆ ಖುಷಿಯ ವಿಚಾರ. ನೇಹಾ ಸಾಧನೆಯ ಬಗ್ಗೆ ಭರವಸೆ ಇಟ್ಟುಕೊಂಡಿದ್ದೇವೆ. ಅದನ್ನು ಅವಳು ಸಾಕಾರಗೊಳಿಸಿದ್ದಾಳೆ. ತರಗತಿಯಲ್ಲೂ ತುಂಬಾ ಶ್ರಮ ಹಾಕುತ್ತಿದ್ದಳು. ಅವಳ ಶಮ್ರಕ್ಕೆ ಈ ರ್ಯಾಂಕ್ ಬಂದಿದೆ. ಮುಂದಿನ ಅವಳ ಭವಿಷ್ಯ ಉಜ್ವಲವಾಗಿರಲಿ.
-ಸಂದೀಪ್ ಗಾಣಿಗ, ಉಪನ್ಯಾಸಕ ವೆಂಕಟರಮಣ ಪಿಯು ಕಾಲೇಜು

share
Next Story
X