ಕಾರ್ಕಳ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

ಕಾರ್ಕಳ: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು 100% ಫಲಿತಾಂಶ ಪಡೆದುಕೊಂಡಿದೆ. ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಒಟ್ಟು 188 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಳ್ಳುವುದರೊಂದಿಗೆ ಸಂಸ್ಥೆ 100% ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ವಿಭಾಗದಲ್ಲಿ 85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊದಿಗೆ ಸತತ 15ನೇ ಬಾರಿ ನೂರು ಶೇಕಡಾ ಫಲಿತಾಂಶ ಪಡೆದುಕೊಂಡಿದೆ. ವಿಜ್ಞಾನ ವಿಭಾಗದಲ್ಲಿ 103 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಪ್ರೀಶಲ್ ಡಿ ಅಲ್ಮೇಡಾ 591 ಅಂಕಗಳನ್ನು ಪಡೆದುಕೊಂಡು ರಾಜ್ಯಮಟ್ಟದಲ್ಲಿ 7ನೇ ರ್‍ಯಾಂಕ್ ಹಾಗೂ ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವೈಷ್ಣವಿ ಪೈ, ವೆರಿನಾ ಪೆರಿಸ್, ಹಾಗೂ ವಿವಿನ್ ಡಿಸೋಜ 583 ಅಂಕಗಳನ್ನು ಪಡೆದು ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದ 14 ಹಾಗೂ ವಾಣಿಜ್ಯ ವಿಭಾಗದಲ್ಲಿ 14 ಹೀಗೆ ಒಟ್ಟು 28 ವಿದ್ಯಾರ್ಥಿಗಳು ಶೇಖಡಾ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 41 ಹಾಗೂ ವಿಜ್ಞಾನ ವಿಭಾಗದಲ್ಲಿ 47 ವಿದ್ಯಾರ್ಥಿಗಳು ಹೀಗೆ 88 ವಿದ್ಯಾರ್ಥಿಗಳು ಶೇಖಡಾ 90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 57 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 71 ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೆಯಾಗಿ 128 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್) ಪಡೆದುಕೊಂಡಿದ್ದಾರೆ. ಉಳಿದಂತೆ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದುಕೊಂಡಿದ್ದಾರೆ.