ಎ.22ರಂದು ಕಾಂಗ್ರೆಸ್ ಮಹಿಳಾ ಸಮಾವೇಶ

ಉಡುಪಿ, ಎ.21: ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ಗಳ ಜಂಟಿ ಸಹಯೋಗ ದೊಂದಿಗೆ ಉಡುಪಿ ವಿಧಾನಸಭಾ ಕ್ಷೇತ್ರದ ಮಹಿಳಾ ಸಮಾವೇಶ ವವನ್ನು ಎ.22ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾವೇಶದಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮೈಸೂರು ವಿಭಾಗದ ಉಸ್ತುವಾರಿ ನಿಧಿ ಚರ್ತುವೇದಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕ ಸುದರ್ಶನ ಕೌಶಿಕ್, ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಮುಖ್ಯ ಭಾಷಣಕಾರರಾಗಿ ಸುಧೀರ್ ಕುಮಾರ್ ಮಾರೋಳಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





