ಬೆಂಗಳೂರು ಸೇರಿ ರಾಜ್ಯಾದ್ಯಂತ ಶನಿವಾರ (ಎ.22) ಈದುಲ್ ಫಿತ್ರ್

ಬೆಂಗಳೂರು, ಎ.21: ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ನಾಳೆ(ಶನಿವಾರ) ರಾಜ್ಯಾದ್ಯಂತ ಈದುಲ್ ಫಿತ್ರ್(ರಮಝಾನ್) ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರದರ್ಶನ ಸಮಿತಿಯ ಕಾರ್ಯಕಾರಿ ಸದಸ್ಯ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದ್ದಾರೆ.
ಶುಕ್ರವಾರ ಸಂಜೆ ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಮಂಡಳಿ ಕಚೇರಿಯಲ್ಲಿ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕತೆಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿಯ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಬಳ್ಳಾರಿ, ತಿಪಟೂರು, ಬಾಗೇಪಲ್ಲಿ, ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಚಂದ್ರದರ್ಶನವಾಗಿರುವ ಮಾಹಿತಿ ಸಿಕ್ಕಿದೆ. ಅಲ್ಲದೆ, ದೇಶದ ವಿವಿಧ ರಾಜ್ಯಗಳಲ್ಲಿಯೂ ಚಂದ್ರದರ್ಶನ ಆಗಿರುವುದರಿಂದ ಉಲಮಾಗಳು ಶನಿವಾರ(ಎ.22) ಈದುಲ್ ಫಿತ್ರ್ ಆಚರಿಸಲು ತೀರ್ಮಾನಿಸಿದ್ದಾರೆ ಎಂದು ಅವರು ಹೇಳಿದರು.
ಸಭೆಯಲ್ಲಿ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ, ಮೌಲಾನ ಏಜಾಝ್ ಅಹ್ಮದ್ ನದ್ವಿ ಸೇರಿದಂತೆ ಇನ್ನಿತರ ಉಲಮಾಗಳು ಪಾಲ್ಗೊಂಡಿದ್ದರು.








