Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೆ.ಪಿ.ನಡ್ಡಾ ದೇಶದ ಮತದಾರರ ಕ್ಷಮೆ...

ಜೆ.ಪಿ.ನಡ್ಡಾ ದೇಶದ ಮತದಾರರ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

21 April 2023 8:41 PM IST
share
ಜೆ.ಪಿ.ನಡ್ಡಾ ದೇಶದ ಮತದಾರರ ಕ್ಷಮೆ ಕೇಳಬೇಕು: ಸಾಹಿತಿಗಳ ಒತ್ತಾಯ

ಬೆಂಗಳೂರು, ಎ. 21: ‘ಕೇಂದ್ರದಲ್ಲಿರುವ ಎನ್‍ಡಿಎ ಸರಕಾರವು ಹಂತ-ಹಂತವಾಗಿ ರಾಜ್ಯ ಸರಕಾರಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಲೇ ಬರುತ್ತಿದೆ. ಇದಕ್ಕೆ ಪೂರಕವಾಗಿಯೇ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ ಅವರ ಹೇಳಿಕೆಯೂ ಬಂದಿವೆ. ಇದು ಅಂತಿಮವಾಗಿ ಭಾರತದ ಬಹುತ್ವವನ್ನು ನಾಶ ಮಾಡುತ್ತದೆ. ಕಾರಣ, ಸಂವಿಧಾನ ವಿರೋಧಿ ಮಾತುಗಳನ್ನಾಡಿದ ನಡ್ಡಾ ಕೂಡಲೇ ದೇಶದ ಮತದಾರರ ಕ್ಷಮೆ ಯಾಚಿಸಬೇಕು ಮತ್ತು ತಮ್ಮ ಮುಂದಿನ ಭಾಷಣಗಳಲ್ಲಿ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು’ ಎಂದು ಸಾಹಿತಿ, ಕಲಾವಿದರ ಆಗ್ರಹಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಸಾಹಿತಿ ಡಾ.ಕೆ.ಮರುಳಸಿದ್ಧಪ್ಪ, ಲೇಖಕಿ ಡಾ.ವಿಜಯಾ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ  ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಕವಿ ಪೆÇ್ರ.ಕಾಶೀನಾಥ ಅಂಬಲಗಿ, ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಕಲಾವಿದ ಗಿರಿಧರ ಕಾರ್ಕಳ, ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ, ಅಂಕಣಕಾರ ಶ್ರೀನಿವಾಸ ಕಾರ್ಕಳ, ನಡ್ಡಾ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎ.19ರಂದು ಚುನಾವಣಾ ಸಭೆಯೊಂದರಲ್ಲಿ ಭಾಷಣ ಮಾಡಿದ ಬಿಜೆಪಿಯ ಜೆ.ಪಿ.ನಡ್ಡಾ ಅವರು ‘ಕರ್ನಾಟಕದಲ್ಲಿ ಅಭಿವೃದ್ಧಿಯು ನಿರಂತರವಾಗಿ ಹರಿಯಲು ನಿಮಗೆ ಮೋದಿಯವರ ಆಶೀರ್ವಾದ ಬೇಕು. ಆದುದರಿಂದ ರಾಜ್ಯವು ಮೋದಿ ಅವರ ಆಶೀರ್ವಾದದಿಂದ ದೂರವಿರಬಾರದು' ಎಂಬ ಮಾತನ್ನು ಹೇಳಿದ್ದಾರೆ. ಈ ಮಾತಿನ ಮೂಲಕ ನಡ್ಡಾ, ‘ಬಿಜೆಪಿಗೆ ಮತ ಹಾಕದಿದ್ದರೆ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲ' ಎಂಬ ಬೆದರಿಕೆಯನ್ನು ಮತದಾರರಿಗೆ ಹಾಕುವುದರ ಜೊತೆಗೆ ಪಕ್ಷ ರಾಜಕಾರಣದಿಂದ ಹೊರಗೆ ಇರಬೇಕಾಗಿರುವ ಪ್ರಧಾನಿ ಹುದ್ದೆಯ ಘನತೆಯನ್ನು ಸಂಕುಚಿತಗೊಳಿಸಿದ್ದಾರೆ. ನಡ್ಡಾ ಅವರ ಮಾತುಗಳು ಪುಜಾಪುಭುತ್ವದ ಮೇಲಿನ ಧಾಳಿ ಹೇಗೋ ಹಾಗೆ ಸಂವಿಧಾನದ ಮೇಲಿನ ಆಕ್ರಮಣವೂ ಹೌದು’ ಎಂದು ಅವರುಗಳು ಟೀಕಿಸಿದ್ದಾರೆ.

‘ಕರ್ನಾಟಕವೂ ಸೇರಿದಂತೆ ದೇಶದ ಯಾವ ರಾಜ್ಯವಾದರೂ ತನಗೆ ಬೇಕಾದ ಪಕ್ಷವನ್ನು ಚುನಾವಣೆಯ ಮೂಲಕ ಅಧಿಕಾರಕ್ಕೆ ತರುವ ಹಕ್ಕನ್ನು ಸಂವಿಧಾನವು ಮತದಾರರಿಗೆ ನೀಡಿದೆ. ಮತದಾರರ ಅಯ್ಕೆಯನ್ನು ಕೇಂದ್ರದಲ್ಲಿರುವ ಒಕ್ಕೂಟ ಸರಕಾರ ಗೌರವಿಸಬೇಕು. ಸಂವಿಧಾನದ ಅಧಿಕಾರವನ್ನು ರಾಜ್ಯ ಮತ್ತು ಕೇಂದ್ರಗಳ ನಡುವೆ ಹಂಚಿಕೊಟ್ಟಿರುವುದರಿಂದ ಭಾರತವು ಒಂದು ಒಕ್ಕೂಟ ರಾಷ್ಟ್ರ. ಇಲ್ಲಿ ಒಂದು ಇನ್ನೊಂದನ್ನು ದುರ್ಬಲಗೊಳಿಸುವುದಿಲ್ಲ ಬದಲು ಬಲಗೊಳಿಸುತ್ತದೆ. ಆದರೆ ನಡ್ಡಾ ಅವರ ಮಾತುಗಳು ಒಕ್ಕೂಟ ಸರಕಾರದ ಮೂಲ ತತ್ವಗಳಿಗೆ ವಿರೋಧವಾಗಿದ್ದು, ರಾಜ್ಯಗಳ ಅಧಿಕಾರ ಮೊಟಕುಗೊಳಿಸುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.

share
Next Story
X