ಮತದಾನ ಜಾಗೃತಿಗಾಗಿ ಬೀದಿನಾಟಕ ಪ್ರದರ್ಶನ

ಮಂಗಳೂರು, ಎ.21: ರಾಜ್ಯ ಚುನಾವಣೆ ಆಯೋಗ, ದ.ಕ. ಜಿಲ್ಲಾಡಳಿತ, ದ.ಕ. ಜಿಪಂ, ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ನಗರದ ವಿವಿಧ ಬಸ್ ನಿಲ್ದಾಣದಲ್ಲಿ ಬೀದಿನಾಟಕ ಪ್ರದರ್ಶನ ಮತ್ತು ಜಾನಪದ ಗೀತೆಗಳ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ಮತದಾನದ ಮಹತ್ವ, ಯಾವುದೇ ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡುವ ಬಗ್ಗೆ, ಮತದಾನ ಮಾಡುವ ಮುನ್ನ ಎಂತಹ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು, ಅಮಿಷಗಳನ್ನು ಕಂಡಲ್ಲಿ ಮತದಾರರು ಕೈಗೊಳ್ಳ ಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಗರದ ಬಲ್ಮಠದ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸಂತ ಆ್ಯಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಬೀದಿನಾಟಕದ ಮೂಲಕ ಅರಿವು ಮೂಡಿಸಿದರು.
ಮಂಗಳೂರು ತಾಪಂ ಇಒ ಲೋಕೇಶ್, ನಗರದ ಸಂತ ಆ್ಯಗ್ನೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ. ಉದಯ ಕುಮಾರ್, ಸ್ವೀಪ್ ಅಧಿಕಾರಿಗಳಾದ ತೇಜಾಕ್ಷಿ ಮತ್ತು ಡೊಂಬಯ್ಯ ಇಡ್ಕಿದು ಉಪಸ್ಥಿತರಿದ್ದರು.
Next Story





