Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10...

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ: ಪಿಯುಸಿ ಫಲಿತಾಂಶದಲ್ಲಿ ಆಳ್ವಾಸ್ ಉತ್ತಮ ಫಲಿತಾಂಶ

21 April 2023 9:14 PM IST
share
47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ: ಪಿಯುಸಿ ಫಲಿತಾಂಶದಲ್ಲಿ ಆಳ್ವಾಸ್ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ ಒಟ್ಟು 47 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ರ ಒಳಗೆ ಸ್ಥಾನಗಳನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮಾಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಪಿಯುಸಿ ಇತಿಹಾಸದಲ್ಲಿ (ಕೋವಿಡೇತರ) ವಿದ್ಯಾರ್ಥಿಯೊಬ್ಬರು ಪೂಣಾರ್ಂಕ (ಶೇ100) ಪಡೆದಿರುವುದು ಸಾರ್ವಕಾಲಿಕ ಹಾಗೂ ಶಾಶ್ವತ ದಾಖಲೆಯಾಗಿದೆ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜು ಶೇ.99.74 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದಲ್ಲಿ ಅನನ್ಯಾ ಕೆ.ಎ. 600 ಅಂಕಗಳೊಂದಿಗೆ ಪ್ರಥಮ ಹಾಗೂ ದಿಶಾ ರಾವ್ 596 ಅಂಕಗಳೊಂದಿಗೆ 2ನೇ ರ್ಯಾಂಕ್, ವಿಜ್ಞಾನ ವಿಭಾಗದಲ್ಲಿ ಪ್ರಚಿತಾ ಎಂ. 594 ಅಂಕಗಳೊಂದಿಗೆ ರಾಜ್ಯದಲ್ಲಿ ತೃತೀಯ ಹಾಗೂ ಕಲಾ ವಿಭಾಗದಲ್ಲಿ ಚೈತನ್ಯಾ ಗಣಪತಿ ಹೆಗಡೆ 589 ಅಂಕಗಳೊಂದಿಗೆ ರಾಜ್ಯದಲ್ಲಿ ಐದನೇ ಸ್ಥಾನ ಅಲಂಕರಿಸಿದ್ದಾರೆ.

ಓರ್ವ ವಿದ್ಯಾರ್ಥಿನಿ ಶೇ.100, 23 ವಿದ್ಯಾರ್ಥಿಗಳು ಶೇ.98.33% ಅಧಿಕ, 39 ವಿದ್ಯಾರ್ಥಿಗಳು ಶೇ.98ಕ್ಕೂ ಅಧಿಕ ಫಲಿತಾಂಶ ಪಡೆದಿದ್ದು, 338 ವಿದ್ಯಾರ್ಥಿಗಳು ಶೇ.95ಕ್ಕಿಂತಲೂ ಅಧಿಕ, 1181 ವಿದ್ಯಾರ್ಥಿಗಳು 90%ಕ್ಕಿಂತಲೂ ಅಧಿಕ, 1910 ವಿದ್ಯಾರ್ಥಿಗಳು ಶೇ.85 ಕ್ಕೂ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ಇಂಗ್ಲೀಷ್ ವಿಷಯದಲ್ಲಿ ಓರ್ವ ವಿದ್ಯಾರ್ಥಿನಿ, ಕನ್ನಡ ವಿಷಯದಲ್ಲಿ 3, ಹಿಂದಿಯಲ್ಲಿ 1, ಸಂಸ್ಕøತದಲ್ಲಿ 32, ಬೌತಶಾಸ್ತ್ರದಲ್ಲಿ 36, ರಸಾಯನ ಶಾಸ್ತ್ರದಲ್ಲಿ 3, ಗಣಿತದಲ್ಲಿ 98, ಜೀವಶಾಸ್ತ್ರದಲ್ಲಿ 76, ಗಣಕ ವಿಜ್ಞಾನದಲ್ಲಿ 75, ಸಂಖ್ಯಾಶಾಸ್ತ್ರದಲ್ಲಿ 28, ಇಲೆಕ್ಟ್ರಾನಿಕ್ಸ್ ನಲ್ಲಿ 4, ಅರ್ಥಶಾಸ್ತ್ರದಲ್ಲಿ 72, ಬ್ಯುಸಿನೆಸ್ ಸ್ಟಡೀಸ್ ನಲ್ಲಿ 54, ಅಕೌಂಟೆನ್ಸಿ ಯಲ್ಲಿ 88, ಇತಿಹಾಸದಲ್ಲಿ 1, ಬೇಸಿಕ್ ಮ್ಯಾತ್ಸ್ ನಲ್ಲಿ 42, ಸಮಾಜಶಾಸ್ತ್ರದಲ್ಲಿ 3 ವಿದ್ಯಾರ್ಥಿಗಳು 100ಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

ಪ್ರಾಂಶುಪಾಲ ಪ್ರೊ. ಎಂ. ಸದಾಕತ್, ಕಾಮರ್ಸ್ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ, ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

"ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಪೂರಕ ವಾತಾವರಣವಿದ್ದು, ಕಲಿಕೆಯೊಂದಿಗೆ ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯ".
ಡಾ. ಎಂ. ಮೋಹನ ಆಳ್ವ 

share
Next Story
X