ಮಳೆ ಹಿನ್ನೆಲೆ: ದೇವನಹಳ್ಳಿಯಲ್ಲಿ ನಡೆಯಬೇಕಿದ್ದ ಅಮಿತ್ ಶಾ ರೋಡ್ ಶೋ ರದ್ದು

ಬೆಂಗಳೂರು: ನಗರದ ಹೊರವಲಯದ ದೇವನಹಳ್ಳಿಯಲ್ಲಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಮಳೆಯಿಂದಾಗಿ ರದ್ದಾಗಿದೆ.
ಚುನಾವಣಾ ಪ್ರಚಾರಕ್ಕಾಗಿ ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಪಟ್ಟಣದ ಶಿವಗಣೇಶ ಸರ್ಕಲ್‌ನಿಂದ ಚನ್ನರಾಯಪಟ್ಟಣ ಸರ್ಕಲ್‌ವರೆಗೂ ರೋಡ್ ಶೋ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಮಧ್ಯಾಹ್ನ 2ಗಂಟೆಗೆ ಆರಂಭವಾದ ಗುಡುಗು ಸಹಿತ ಮಳೆಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಜನರನ್ನು ಸೇರಿಸಲು ಸಾಧ್ಯವಾಗದ ಕಾರಣ ಕಾರ್ಯಕ್ರಮ ರದ್ದುಗೊಳಿಸಲಾಯಿತು ಎಂದು ತಿಳಿದು ಬಂದಿದೆ.
Next Story





