ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ

ಕೊಣಾಜೆ: ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 121 ವಿದ್ಯಾರ್ಥಿನಿಯರಲ್ಲಿ 35 ವಿದ್ಯಾರ್ಥಿನಿಯರು ಅತ್ಯತ್ತಮ ಶ್ರೇಣಿಯಲ್ಲಿ, 78 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ (PCMB) 26 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಸೌಧ 570 (95 %), ಆಸೀಯಾ ಫಾತಿಮ ಹಮ್ನಾ 565 (94.16 %) ಅಂಕಗಳನ್ನು ಗಳಿಸಿರುತ್ತಾರೆ.
ವಾಣಿಜ್ಯ ವಿಭಾಗದ ಕಂಪ್ಯೂಟರ್ ಸೈನ್ಸ್ (ಗಣಕ ವಿಜ್ಞಾನ) ವಿಭಾಗದಲ್ಲಿ 08 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ನಿಹಾ ಫಾತಿಮಾ 562 (93.66 %) , ಆಯಿಷಾ ಫಾಯಿಮಾ 549 (91.5%) ಅಂಕ ಗಳಿಸಿರುತ್ತಾರೆ.
ವಾಣಿಜ್ಯ ಇತಿಹಾಸ ಮತ್ತು ಕಲಾ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರು ತ್ತಾರೆ. ಫಾತಿಮತ್ ಶೈಮಾ ಎಮ್ ಎಸ್ 557 (92.83 %) ಅಂಕಗಳನ್ನು ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.