Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’...

ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

22 April 2023 9:07 AM IST
share
ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಮಂಗಳೂರು, ಎ.22: ಪವಿತ್ರ ರಮಝಾನ್‌ನ 30 ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು.

ದ.ಕ. ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು.

ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಉಪವಾಸಿಗರು ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು. ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದರು. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು.

ಜಿಲ್ಲೆಯ ಬಹುತೇಕ ಎಲ್ಲಾ ಮಸೀದಿ-ಈದ್ಗಾಗಳಲ್ಲಿ ವಿಶೇಷ ನಮಾಝ್, ಪ್ರವಚನ ಬಳಿಕ ಪರಸ್ಪರ ಹಸ್ತಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಹಾಗೂ ಮನೆಗಳಲ್ಲಿ ಹಬ್ಬದ ಸಂಭ್ರಮ ಕಂಡು ಬಂತು.

ನಗರದ ಬಾವುಟಗುಡ್ಡದ ಈದ್ಗಾ ಜುಮಾ ಮಸ್ಜಿದ್‌ನಲ್ಲಿ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ಹಾಜ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ನೇತೃತ್ವದಲ್ಲಿ ಮತ್ತು ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ನಲ್ಲಿ ಖತೀಬ್ ಇಬ್ರಾಹೀಂ ಸಅದಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.  ಕುದ್ರೋಳಿ ಸಲಫಿ ಮಸೀದಿಯ ಮೈದಾನದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. 

ಮಂಗಳೂರು ಬಾವುಟಗುಡ್ಡದ ಈದ್ಗಾ ಮಸೀದಿಗೆ ಮಾಜಿ ಸಚಿವ ಯು.ಟಿ.ಖಾದರ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಐವನ್ ಡಿಸೋಜ ಸೌಹಾರ್ದ ಭೇಟಿ ನೀಡಿದರು. ಈದ್ಗಾ ಮಸೀದಿ ಅಧ್ಯಕ್ಷ ಯೆನೆಪೊಯ ಅಬ್ದುಲ್ಲಾ ಕುಂಞಿ ಈದ್ ಸಂದೇಶ ನೀಡಿದರು. ಮಾಜಿ ಮೇಯರ್ ಕೆ. ಅಶ್ರಫ್, ಈದ್ಗಾ ಮಸ್ಜಿದ್ ಕೋಶಾಧಿಕಾರಿ ಸೈಯದ್ ಬಾಷಾ ತಂಙಳ್, ಅದ್ದು ಹಾಜಿ, ಸಮದ್ ಹಾಜಿ ಮತ್ತಿತರರು ಉಪಸ್ಥಿತರಿದ್ದರು.

share
Next Story
X