ಬೈಂದೂರು: ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಬೈಂದೂರು, ಎ.22: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿ ದೋಣಿಯಲ್ಲಿ ಬಲೆಯನ್ನು ಎಳೆಯುತ್ತಿರುವಗ ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರರೊಬ್ಬರು ಅಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉಪ್ಪುಂದ ಗ್ರಾಮದ ಮಡಿಕಲ್ ಜಟ್ಟಿಯಲ್ಲಿ ನಡೆದಿದೆ.
ಮೃತರನ್ನು ನಾಗರಾಜ (43) ಎಂದು ಗುರುತಿಸಲಾಗಿದೆ. ಇವರು ಇತರ ಮೀನುಗಾರರೊಂದಿಗೆ ಶುಕ್ರವಾರ ದೋಣಿಯಲ್ಲಿ ಮೀನುಗಾರಿಕೆಗೆಂದು ಮಡಿಕಲ್ ಜಟ್ಟಿಯಿಂದ ತೆರಳಿದ್ದು, 12 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಂಜೆ 4:00ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ದೋಣಿಯಲ್ಲಿದ್ದವರು ತಕ್ಷಣ ನಾಗರಾಜರನ್ನು ನೀರಿನಿಂದ ಮೇಲಕ್ಕೆತ್ತಿ ಉಪಚರಿಸಿ 108 ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ ಸೇರಿಸಿ ಬಳಿಕ ಅಲ್ಲಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ನಾಗರಾಜ್ ರಾತ್ರಿ 9:30ರ ಸುಮಾರಿಗೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story