ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ

ವಿಜಯಪುರ: ರವಿವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಎಂಬಿ ಪಾಟೀಲ್ ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಹುಲ್ ಗಾಂಧಿ ಅವರು ಬಸವ ಜಯಂತಿ ಹಿನ್ನೆಲೆ ಹೈದರಾಬಾದ್ ಮೂಲಕ ಹುಬ್ಬಳ್ಳಿಗೆ ಆಗಮಿಸಿ, ತದನಂತರ 11:45ಕ್ಕೆ ಕೂಡಲಸಂಗಮಕ್ಕೆ ಬರುತ್ತಾರೆ. ಬಸವಣ್ಣನವರ ಐಕ್ಯಮಂಟಪಕ್ಕೆ ನಮನ ಸಲ್ಲಿಸಲಿದ್ದಾರೆ' ಎಂದು ಮಾಹಿತಿ ನೀಡಿದರು.
ಸಂಜೆ 4ಕ್ಕೆ ವಿಜಯಪುರ ನಗರಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, 4 ಗಂಟೆಗೆ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ತಿಳಿಸಿದರು.
ಈ ಸಮಾರಂಭದಲ್ಲಿ ವಿವಿಧ ಮಠಾಧೀಶರು, ಗಣ್ಯರು ಭಾಗವಹಿಸುತ್ತಾರೆ ಎಂದರು.
Next Story





