ಆಕಸ್ಮಿಕ ಬೆಂಕಿ: ಹೆದ್ದಾರಿಯಲ್ಲೇ ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು

ಮಂಡ್ಯ, ಎ.22: ಶ್ರೀರಂಗಪಟ್ಟಣ ತಾಲೂಕಿನ ಗಣಗೂಂರು ಟೋಲ್ ಸಂಗ್ರಹ ಬಳಿ ಮಂಡ್ಯ- ಮೈಸೂರು ರಾಷ್ಟ್ರೀಯ ಹೆದ್ದಾರಿ ಬಳಿ ಬಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದ್ದು ಪ್ರಯಾಣಿಕರು ಪ್ರಾಣ ಪಾಯದಿಂದ ಪಾರಾಗಿದ್ದಾರೆ.
ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಮದುವೆಗೆಂದು ಬಸ್ ನಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರು ತೆರಳುತ್ತಿದ್ದರು. ಗಣಂಗೂರು ಬಳಿ ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಬಸ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದು ಪ್ರಯಾಣಿಕರ ಗಮನಕ್ಕೆ ಬಂದ ತಕ್ಷಣ ಬಸ್ ನಿಲ್ಲಿಸಿ ಎಲ್ಲರೂ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗನೆ ಹೊತ್ತಿ ಉರಿದ ಪರಿಣಾಮ ಬಸ್ ಸಂಪೂರ್ಣವಾಗಿ ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿಯನ್ನು ನಂದಿಸಿದರು.
Next Story





