ಬಂಟ್ವಾಳ: ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ

ಬಂಟ್ವಾಳ, ಎ.23: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈಯವರ ಚುನಾವಣಾ ಕಚೇರಿಗೆ ಶನಿವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು.
ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ ಕುರಿತು ಮಾತುಕತೆ ನಡೆಸಿದ ಅವರು, ರೈ ಅವರ ಚುನಾವಣಾ ಯಶಸ್ಸಿಗೆ ಶುಭಕೋರಿದರು.
ಈ ವೇಳೆ ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ, ಸಿದ್ದೀಕ್ ಸರವು ಮೊದಲಾದವರು ಉಪಸ್ಥಿತರಿದ್ದರು.

Next Story