Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು: ಮಾಜಿ ಜಿ.ಪಂ ಸದಸ್ಯ ಬಾಬು...

ಬೈಂದೂರು: ಮಾಜಿ ಜಿ.ಪಂ ಸದಸ್ಯ ಬಾಬು ಹೆಗ್ಡೆ, ಶಂಕರ್ ಪೂಜಾರಿ, ಎಪಿಎಂಸಿ ಅಧ್ಯಕ್ಷ ವೆಂಕಟ್ ಪೂಜಾರಿ ಕಾಂಗ್ರೆಸ್ ಸೇರ್ಪಡೆ

23 April 2023 11:53 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೈಂದೂರು: ಮಾಜಿ ಜಿ.ಪಂ ಸದಸ್ಯ ಬಾಬು ಹೆಗ್ಡೆ, ಶಂಕರ್ ಪೂಜಾರಿ, ಎಪಿಎಂಸಿ ಅಧ್ಯಕ್ಷ ವೆಂಕಟ್ ಪೂಜಾರಿ ಕಾಂಗ್ರೆಸ್ ಸೇರ್ಪಡೆ

ಬೈಂದೂರು: ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಮುನಿಸಿನ ಬೆನ್ನಲ್ಲೇ ಜಿ.ಪಂ.ಮಾಜಿ ಸದಸ್ಯರಿಬ್ಬರು, ಇಬ್ಬರು ಮಾಜಿ ತಾ.ಪಂ ಸದಸ್ಯರ ಸಹಿತ ನೂರಾರು ಮಂದಿ ಮುಖಂಡರು ಬಿಜೆಪಿ ತೊರೆದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಬಿಜೆಪಿ ಹಿರಿಯ ಮುಖಂಡ ಹಾಗೂ ಜಿಪಂ ಮಾಜಿ ಸದಸ್ಯ ಬಾಬು ಹೆಗ್ಡೆ ತೆಗ್ಗರ್ಸೆ, ಬೈಂದೂರು ಜಿಪಂ ಮಾಜಿ ಸದಸ್ಯ ಶಂಕರ್ ಪೂಜಾರಿ, ಮಾಜಿ ತಾಪಂ ಸದಸ್ಯರಾದ ಸದಾಶಿವ ಪಡುವರಿ, ದಸ್ತಗಿರಿ ಸಾಹೇಬ್, ಕುಂದಾಪುರ ಎಪಿಎಂಸಿ ಅಧ್ಯಕ್ಷ ವೆಂಕಟ ಪೂಜಾರಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ದೀಪಕ್ ಶೆಟ್ಟಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರಿಗೆ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿ ಕೊಂಡರು.

ಈ ಸಂದರ್ಭ ಮಾತನಾಡಿದ ಬಾಬು ಹೆಗ್ಡೆ, 35 ವರ್ಷದಿಂದ ಬಿಜೆಪಿಯಲ್ಲಿ ಕೆಲಸ ಮಾಡಿ ಪಕ್ಷದ ಶಾಸಕರು, ಸಂಸದರ ಚುನಾವಣೆಯಲ್ಲಿ ಕೆಲಸ ಮಾಡಿದ್ದು, 2008ರಲ್ಲಿ ಬ್ಯಾಂಕ್ ನೌಕರಿಗೆ ರಾಜಿನಾಮೆ ನೀಡಿ ಸಕ್ರೀಯವಾದೆ. 2013ರಲ್ಲಿ ಪಕ್ಷದ ಟಿಕೆಟ್ ನೀಡುವುದಾಗಿ ಸುಳ್ಳು ಹೇಳಿದರು. 2018ರಲ್ಲಿ ಟಿಕೆಟ್ ನೀಡಿಲ್ಲ. ಈ ಬಾರಿಯೂ ಆಶ್ವಾಸನೆ ನೀಡಿ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿಸಲಾಯಿತು. ಬಿಜೆಪಿಯಲ್ಲಿ ಶಾಸಕ ಸ್ಥಾನದ ಸ್ಪರ್ಧಿಯಾಗಲು 10 ಮಾನದಂಡವಿದೆ. ಅದರಲ್ಲಿ ನನಗೆ ಯಾವುದು ಇಲ್ಲ ಎಂಬುದು ಇನ್ನೂ ಅರ್ಥವಾಗಿಲ್ಲ. ನಾನು ಸಾಲಗಾರ, ಸುಸ್ತಿದಾರ ಅಲ್ಲ. ಅವಿದ್ಯಾವಂತನೂ ಅಲ್ಲ ನಾನೊಬ್ಬ ಪದವೀಧರ. ಇನ್ನೂ ಅವಕಾಶವಿದೆ ಎಂಬ ಭರವಸೆ ಹೇಳಿ ಹೈಕಮಾಂಡ್ ನುಣುಚಿಕೊಳ್ಳುತ್ತದೆ. ಹಾಗಾದರೆ ಅವಕಾಶಕ್ಕಾಗಿ ಎಷ್ಟು ದಿನ ಕಾಯಬೇಕು ? ಅದಕ್ಕಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ. ನಂಬಿಸಿ ಮೋಸ ಮಾಡಿದ ಬಿಜೆಪಿಯ ಮೋಸ ಬಯಲಿಗೆಳೆಯುವ ಕೆಲಸ ಮುಂದಿನ ದಿನ ಮಾಡುವೆ. ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದಾಗ ಯಾವುದೇ ಷರತ್ತಿಲ್ಲದೆ ಸೇರ್ಪಡೆಯಾಗಿರುವೆ. ಈ ಚುನಾವಣೆಯಲ್ಲಿ ಗೋಪಾಲ ಪೂಜಾರಿಯವರನ್ನು ಗೆಲ್ಲಿಸಲು ಶ್ರಮವಹಿಸುತ್ತೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ನಂಬಿ ನೂರಾರು ಕಾರ್ಯಕರ್ತರು ಬಂದಿದ್ದು ಇಲ್ಲಿ ಹೊಸಬರು ಹಳಬರು ಪ್ರಶ್ನೆ ಬೇಡ. ಚುನಾವಣಾ ಸಮಯದಲ್ಲಿ ಕಷ್ಟಕಾಲದಲ್ಲಿ ಕೈ ಹಿಡಿದವರೆಲ್ಲರೂ ನಾಯಕರು. ಮನೆ ಕಟ್ಟಿದವರಿಗೆ ಬಿಜೆಪಿಯಲ್ಲಿ ಬೆಲೆಯಿಲ್ಲ. ಪಕ್ಷಕ್ಕೆ ಬರುವವರನ್ನು ಹೃದಯ ಶ್ರೀಮಂತಿಕೆಯಿಂದ ಬರಮಾಡಿಕೊಂಡು ಹಿರಿಯರ ಅನುಭವ, ಮಾರ್ಗದರ್ಶನದಲ್ಲಿ ಶ್ರಮವಹಿಸಿ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಕರೆ ನೀಡಿದರು.

ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, ಬೈಂದೂರು ಕ್ಷೇತ್ರದಲ್ಲಿ 12 ಮಂದಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿತ್ತು. ಇದೀಗಾ ಆರ್.ಎಸ್.ಎಸ್ ಕುತಂತ್ರ ಎಲ್ಲರಿಗೂ ಅರಿವಾಗಿದೆ ಎಂದರು.

"ಕಾಂಗ್ರೆಸ್ ನನ್ನ ಸ್ವಂತ ಮನೆ. ಮೊದಲು 20-25 ವರ್ಷ ಕಾಂಗ್ರೆಸ್ಸಿನಲ್ಲಿದ್ದು ದುಡಿದ ಖುಷಿಯಿದೆ. ಬಿ.ಎಂ ಸುಕುಮಾರ್ ಶೆಟ್ಟಿಯವರು ಕರೆದಾಗ ಅವರ ಮೇಲಿನ ಗೌರವದಿಂದ ಬಿಜೆಪಿ ಸೇರಿದೆ. ಅವರು ಒಳ್ಳೆ ರೀತಿ ನಡೆಸಿಕೊಂಡರು. ಆದರೆ ಈ ಬಾರಿ ಬಿಜೆಪಿ ಪಕ್ಷವು ಸುಕುಮಾರ ಶೆಟ್ಟಿ, ಬಾಬು ಹೆಗ್ಡೆಯವರನ್ನು ನಡೆಸಿಕೊಂಡ ರೀತಿಯಿಂದ ಕಾರ್ಯಕರ್ತರ ಕಡೆಗಣನೆ ತಿಳಿದಿದೆ. ಅದಕ್ಕಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ".

-ಶಂಕರ ಪೂಜಾರಿ

"ಹಲವು ಬಾರಿ ಕಾಂಗ್ರೆಸ್ ಸೇರಲು ಬುಲಾವ್ ಇತ್ತು. ಇದೀಗಾ ಸುಸಮಯ ಎಂದು ಸೇರ್ಪಡೆಯಾಗಿರುವೆ. ಗೋಪಾಲ ಪೂಜಾರಿಯವರನ್ನು ಗೆಲ್ಲಿಸಲು ರಾತ್ರಿ ಹಗಲು ದುಡಿಯೋಣ".
- ವೆಂಕಟ ಪೂಜಾರಿ

"1991ರಲ್ಲಿ ಬಿಜೆಪಿ ಸೇರಿದ ಬಳಿಕ 4 ಬಾರಿ ಗ್ರಾ.ಪಂ ಹಾಗೂ ಒಂದು ಬಾರಿ ತಾ‌ಪಂ ಸದಸ್ಯ, ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ 32 ವರ್ಷ ದೀರ್ಘಕಾಲದ ಸೇವೆ ಮಾಡಿದ್ದೆ. ಬಿಜೆಪಿಯಲ್ಲಿ ದೀರ್ಘಕಾಲದ ಸೇವೆಗೆ ಬೆಲೆಯಿಲ್ಲ. 50 ವರ್ಷದ ಮೇಲಿನವರಿಗೆ ಬಿಜೆಪಿಯಲ್ಲಿ ಬೆಲೆಯಿಲ್ಲ. ವೃದ್ಧಾಶ್ರಮಕ್ಕೆ ಸೇರಿಸಿದಂತೆ ಮೂಲೆಗುಂಪು ಮಾಡುತ್ತಾರೆ. ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ. ಗೋಪಾಲ ಪೂಜಾರಿ ಗೆದ್ದು ಸಚಿವರಾಗುತ್ತಾರೆ".
- ಸದಾಶಿವ ಪಡುವರಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X