‘ಏಕಾಂತದಿಂದ ಲೋಕಾಂತರಕೆ’ ಗ್ರಂಥ ಬಿಡುಗಡೆ

ಮಂಗಳೂರು : ನಮ್ಮಲ್ಲಿ ವಿವಿಧ ಜಾತಿ, ಧರ್ಮಗಳನ್ನು ಪ್ರತಿನಿಧಿಸುವ ಸಮುದಾಯಗಳಿವೆ. ಆದರೆ ಸಾಹಿತ್ಯ ಜಾತ್ಯತೀತವಾದುದು. ಸಾರ್ವಕಾಲಿಕ ಮೌಲ್ಯಗಳ ದಾಖಲಾತಿಯೊಂದಿಗೆ ಸಮಾಜದ ಕಣ್ತೆರೆಸುವ ಸಾಹಿತ್ಯ ಕೃತಿ ಗಳು ಬರಬೇಕು’ ಎಂದು ಮುಂಬೈ ಹೇರಂಬ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಹೇಳಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಜರಗಿದ ಇಂಟರ್‌ನಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನ ‘ಸಾಂಸ್ಕೃತಿಕ ವೈಭವ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ‘ಏಕಾಂತದಿಂದ ಲೋಕಾಂತರಕೆ’ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಟ್ರಸ್ಟ್ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು. ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಎನ್. ವಿನಯ ಹೆಗ್ಡೆ, ಎಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ, ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ, ಕ್ಯಾಂಪ್ಕೋ ನಿರ್ದೇಶಕ ಕೋಲಾರು ಸತೀಶ್ಚಂದ್ರ ಭಂಡಾರಿ, ಸಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಭಾಸ್ಕರ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಥಾಣೆ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ, ಸದಾಶಯ ತ್ರೈಮಾಸಿಕದ ಉಪ ಸಂಪಾದಕ ತೀರ್ಥಹಳ್ಳಿ ವಿಶ್ವನಾಥ ಶೆಟ್ಟಿ ಭಾಗವಹಿಸಿದ್ದರು.
ಲೇಖಕ ಭಾಸ್ಕರ ರೈ ಕುಕ್ಕುವಳ್ಳಿ ಕೃತಿಯ ಬಗ್ಗೆ ಮಾತನಾಡಿದರು. ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ರಾಜ ಗೋಪಾಲ್ ರೈ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ದೇವಿಚರಣ್‌ಶೆಟ್ಟಿ ಅತಿಥಿಗಳನ್ನು ಗೌರವಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯಲಕ್ಷ್ಮಿ ಬಿ.ಶೆಟ್ಟಿ ವಂದಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.