ದ.ಕ. ಜಿಲ್ಲಾಧಿಕಾರಿ ರವಿಕುಮಾರ್‌ಗೆ ಬೆದರಿಕೆ ಕರೆ: ದೂರು ದಾಖಲು

ಮಂಗಳೂರು, ಎ.23: ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದದಿಂದ ಬೈದು ಬೆದರಿಕೆ ಹಾಕಿದ ಬಗ್ಗೆ ನಗರದ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ.
ಎ.20ರಂದು ಅಪರಾಹ್ನ 3:28ಕ್ಕೆ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವೀಕ್ಷಕರೊಂದಿಗೆ ಸಭೆ ನಡೆಸುತ್ತಿರುವ ವೇಳೆ ತನ್ನ ಮೊ.ಸಂ.ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಕೆಟ್ಟ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಲ್ಲದೆ ‘ಒಂದೂವರೆ ತಿಂಗಳ ಕಾಣಿಕೆ ನೀಡುವೆ. ಒಬ್ಬ ಕೆಎಂಎಫ್ ಸಿಬ್ಬಂದಿಯನ್ನು ಈಗಲೇ ಮಂಗಳೂರಿನಿಂದ ತುಮಕೂರಿಗೆ ಕಳುಹಿಸಿಕೊಡಬೇಕು ಎಂಬುದಾಗಿ ಒತ್ತಡ ಹಾಕಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.
Next Story





