ವಾಹನಗಳಲ್ಲಿ ಪ್ರಖರ ಬೆಳಕು: ಮಂಗಳೂರು ಪೊಲೀಸರ ವಿಶೇಷ ಕಾರ್ಯಾಚರಣೆ

ಮಂಗಳೂರು, ಎ.23: ನಿಯಮಗಳನ್ನು ಮೀರಿಕೊಂಡು ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಮಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಸುಮಾರು 25 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಕ್ರಮ ಜರಗಿಸಿದ್ದಾರೆ.
ಅತ್ಯಾಕರ್ಷಣೆಯ ಉದ್ದೇಶದಿಂದ ಅನಗತ್ಯವಾಗಿ ಅಳವಡಿಸುವ ಇಂತಹ ಬೆಳಕುಗಳು ವಾಹನ ಚಾಲಕರಿಗೆ ಅಪಾಯಕಾರಿಯಾಗಿದೆ. ಹಾಗಾಗಿ ಇದರ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
Next Story





