ಕಲಾವಿದರಿಗೆ ಆಹಾರ ಸಾಮಾಗ್ರಿ ವಿತರಣೆ

ಮಂಗಳೂರು, ಎ.23: ಕಲೆಗಳು ನಾಡಿನ ಹೆಮ್ಮೆಯ ಪ್ರತೀಕವಾಗಿದ್ದು, ಮನಸ್ಸಿಗೆ ನೆಮ್ಮದಿ ನೀಡುವ ಸಂಗೀತ ಕಲೆಯು ದೇಶದ ಸಂಸ್ಕೃತಿಯೊಂದಿಗೆ ಬೆಸೆದಿದೆ. ಹಾಗಾಗಿ ಅಶಕ್ತ ಕಲಾವಿದರನ್ನು ಪ್ರೋತ್ಸಾಹಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಿದೆ ಎಂದು ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಹೇಳಿದರು.
ಶ್ರೀ ಅನ್ನಪೂರ್ಣೇಶ್ವರಿ ಅಂಧರ ಕಲಾ ಸಂಘ, ತೃಷಾ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕ ಮತ್ತು ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಇವುಗಳ ವತಿಯಿಂದ ನಗರದ ಹ್ಯಾಟ್‌ಹಿಲ್‌ನ ವನಿತಾ ಪಾರ್ಕ್‌ನಲ್ಲಿ ರವಿವಾರ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕಲಾವಿದರಿಗೆ ಆಹಾರ ಸಾಮಾಗ್ರಿ ವಿತರಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಬ್ಯಾಂಕ್ ಆಫ್ ಬರೋಡಾದ ಚೀಫ್ ಮ್ಯಾನೇಜರ್ ಸತೀಶ್ ಪಾಟ್ಕರ್, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕ ಪಿ.ಬಿ.ಹರೀಶ್ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಲಾ ಸಾಧನಾ ಮ್ಯೂಸಿಕ್ ಶಾಲೆಯ ನಿರ್ದೇಶಕಿ ವಿಭಾ ಶ್ರೀನಿವಾಸ್ ಭಾಗವಹಿಸಿದ್ದರು.
ಅಂಧರ ಕಲಾ ಸಂಘದ ಮುಖ್ಯಸ್ಥ ರಾಘವೇಂದ್ರ, ಕಲಾವಿದರಾದ ರಾಮಚಂದ್ರ, ಮಂಜುನಾಥ, ವೆಂಕಟೇಶ್, ಚೆನ್ನಮ್ಮ ಅವರನ್ನು ಗೌರವಿಸಲಾಯಿತು.
ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶ್ರೀ ಅನ್ನಪೂರ್ಣೇಶ್ವರಿ ಅಂಧರ ಕಲಾ ಸಂಘದ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಿತು.