Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ಧ್ವೇಷದ...

ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ಧ್ವೇಷದ ಹುಳಿ ಹಿಂಡುವುದೇ ಬಿಜೆಪಿ ಸಾಧನೆ: ಇನಾಯತ್‌ ಅಲಿ ಆರೋಪ

► ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ► ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದ 70ಕ್ಕೂ ಅಧಿಕ ಕಾರ್ಯಕರ್ತರು

23 April 2023 7:14 PM IST
share
ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ಧ್ವೇಷದ ಹುಳಿ ಹಿಂಡುವುದೇ ಬಿಜೆಪಿ ಸಾಧನೆ: ಇನಾಯತ್‌ ಅಲಿ ಆರೋಪ
► ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ► ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದ 70ಕ್ಕೂ ಅಧಿಕ ಕಾರ್ಯಕರ್ತರು

ಸುರತ್ಕಲ್, ಎ.23: ಬಿಜೆಪಿ ನಾಯಕರು ಅಭಿವೃದ್ಧಿ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ಧ್ವೇಷದ ಹುಳಿ ಹಿಂಡುವ ಕೆಲಸವನ್ನಷ್ಟೇ ಮಾಡಿದ್ದಾರೆ. ಇದಷ್ಟೇ ಬಿಜೆಪಿಯ ಸಾಧನೆ ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಹೇಳಿದರು.

ಅವರು ಕಾವೂರಿನ ಶಾಂತಿನಗರದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕೋವಿಡ್‌ ಬಳಿಕ ಬೆಲೆ ಏರಿಕೆ, ಉದ್ಯೋಗ ಇಲ್ಲದೆ ವಿದ್ಯಾವಂತರು ಕಂಗೆಟ್ಟು ಹೋಗಿದ್ದಾರೆ. ಬಿಜೆಪಿಯ ದುಷ್ಟ ಆಡಳಿತದಿಂದ ಬೇಸತ್ತಿರುವ ಜನರು ಈ ಬಾರಿ ಕಾಂಗ್ರೆಸ್‌ ಬೆಂಬಲಿಸಿ ಅಧಿಕಾರಕ್ಕೆ ತರಲಿದ್ದಾರೆ ಎಂದರು.

ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಉಮೇಶ್ ದಂಡೆಕೇರಿ ಮಾತನಾಡಿ, ಇನಾಯತ್ ಅಲಿ ಅವರು ಬಲಕೈಯಲ್ಲಿ ಮಾಡಿರುವ ದಾನ ಎಡಗೈಗೆ ತಿಳಿಯಬಾರದು ಎಂದು ಯೋಚಿಸುವ ವ್ಯಕ್ತಿ. ಜಾತಿ ಧರ್ಮಗಳನ್ನು ಮೀರಿ ಅದೆಷ್ಟೋ ಬಡ ಹೆಣ್ಣು ಮಕ್ಕಳ ಮದುವೆ, ಯುವಕರಿಗೆ ಉದ್ಯೋಗ, ಮನೆ ಇಲ್ಲದವರಿಗೆ ಮನೆ, ಆರ್ಥಿಕ ಸಹಾಯ ಮಾಡಿದ್ದಾರೆ. ಅದನ್ನೂ ಇಂದಿಗೂ ಅವರು ಎಲ್ಲಿಯೂ ಹೇಳಿಕೊಳ್ಳುತ್ತಿಲ್ಲ. ಆದರೆ, ಭರತ್‌ ಶೆಟ್ಟಿಯವರಿಗೆ ಹಿಂದೂ ಯುವಕರ ಹೆಣದ ಮೇಲೆ ರಾಜಕೀಯ ಮಾಡುವುದು ಮಾತ್ರ ಗೊತ್ತು. ಅದು ಬಿಟ್ಟು ಎಷ್ಟು ಮಂದಿ ಹಿಂದೂ ಯುವಕರಿಗೆ ಕೆಲಸ ಕೊಟ್ಟಿದ್ದಾರೆ. ಎಷ್ಟು ಜನರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ? ಎಂದು ಅವರು ಪ್ರಶ್ನಿಸಿದರು.

ಮಾಜಿ ಮೇಯರ್ ಶಶಿಧರ್ ಹೆಗ್ಡೆ ಮಾತಾಡಿದರು. ವೇದಿಕೆಯಲ್ಲಿ ನೀರಜ್ ಪಾಲ್, ಪುರುಷೋತ್ತಮ ಚಿತ್ರಾಪುರ, ಮಾಜಿ ಮೇಯರ್‌ ಕವಿತಾ ಸನಿಲ್, ಗಿರೀಶ್ ಆಳ್ವ, ದೀಪಕ್ ಪೂಜಾರಿ, ಮುಹಮ್ಮದ್ ಕುಂಜತ್ತಬೈಲ್, ಉತ್ತಮ್ ಆಳ್ವ, ರಾಘವೇಂದ್ರ ರಾವ್, ಸಾರಿಕಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಕಾವೂರಿನ ಶಾಂತಿನಗರದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿಯ ಹಲವು ಯುವ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಗೊಂಡರು. ಯುವ ಕಾಂಗ್ರೆಸ್ ಮುಖಂಡ ಉತ್ತಮ್ ಆಳ್ವ ಸಾರಥ್ಯದಲ್ಲಿ ತುಷಾರ್, ಅಭಿಲಾಷ್, ಚಂದ್ರಶೇಖರ, ಮನೋಜ್, ಹೃತಿಕ್ ಶೆಟ್ಟಿ, ಇರ್ಷಾದ್ ಮತ್ತು ತಂಡದ 70ಕ್ಕೂ ಹೆಚ್ಚು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇನಾಯತ್ ಅಲಿ ಅವರು ಪಕ್ಷದ ಧ್ವಜ ಕೊಟ್ಟು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

"ಜನರು ಕೋವಿಡ್ ಬಳಿಕ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಅದೆಷ್ಟೋ ವಿದ್ಯಾವಂತ ಯುವಜನತೆ ಉದ್ಯೋಗ ಕಳೆದುಕೊಂಡಿದ್ದಾರೆ. ಬಿಜೆಪಿಯವರು ತಮ್ಮದು ಡಬಲ್ ಇಂಜಿನ್ ಸರಕಾರ ಅಂತ ಹೇಳ್ತಾರೆ. ಆದರೆ ಅದರ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ದೂರದ ಯುಪಿ, ಗುಜರಾತ್‌ನಲ್ಲಿದೆ"

- ಇನಾಯತ್‌ ಅಲಿ, ಮಂಗಳೂರು ಉತ್ತರ ಕಾಂಗ್ರೆಸ್‌ ಅಭ್ಯರ್ಥಿ

share
Next Story
X