ಸಿದ್ದರಾಮಯ್ಯ ವಿರುದ್ಧ ಚುನಾವಣಾಧಿಕಾರಿಗೆ ದೂರು

ಬೆಂಗಳೂರು, ಎ.23: ‘ಲಿಂಗಾಯತ ಮುಖ್ಯಮಂತ್ರಿ’ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯನ್ನು ಉಲ್ಲೇಖಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಕೀಲ ಬಸವರಾಜ ಹಲ್ಲದ್ ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ರವಿವಾರ ದೂರು ನೀಡಿದ್ದಾರೆ.
ಎಐಸಿಸಿ ಮುಖಂಡ ರಾಹುಲ್ ಗಾಂಧಿ ರೀತಿಯಲ್ಲೇ ನಿದಿಷ್ಟ ಸಮುದಾಯದ ಅವಹೇಳನ ಮಾಡಲಾಗಿದ್ದು, ಸಿದ್ದರಾಮಯ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಿದ್ದಾರೆ. ಈ ವೇಳೆ ಮುಖಂಡ ಚಂದ್ರಮೌಳಿ, ರೇಣುಕಾ ಪಾಟೀಲ್, ಹರ್ಷವರ್ಧನ್ ಸೇರಿದಂತೆ ಇನ್ನಿತರರು ಹಾಜರಿದ್ದರು.
Next Story





