ಎಲ್ಲರೂ ಒಂದಾಗಿ ಬಾಳೋಣ, ಬೆಳೆಯೋಣ: ಸುಧೀರ್ ಕುಮಾರ್
ಕಾಂಗ್ರೆಸ್ ಮಹಿಳಾ ಸಮಾವೇಶ
ಉಡುಪಿ: ಎಲ್ಲರೂ ಒಂದಾಗಿ ಬಾಳೋಣ, ಬೆಳೆಯೋಣ. ಯಾರನ್ನೂ ಯಾರನ್ನೂ ದ್ವೇಷಿಸದೆ ಶಾಂತಿಯಿಂದ ಇರೋಣ. ಇದು ಉಪನಿಷತ್ತು ಹಾಗೂ ನಮ್ಮ ಸಂಸ್ಕೃತಿ. ಕಾಂಗ್ರೆಸ್‌ನ ಆಡಳಿತದ ನೀತಿಯೂ ಇದೇ ಆಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರ ಸುಧೀರ್ ಕುಮಾರ್ ಮುರೋಳಿ ಹೇಳಿದ್ದಾರೆ.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಶನಿವಾರ ಉಡುಪಿಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಉಡುಪಿ ವಿಧಾನಸಭಾ ಕ್ಷೇತ್ರದ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಅವರು ದಿಕ್ಸೂಚಿ ಭಾಷಣದಲ್ಲಿ ಮಾತನಾಡುತಿದ್ದರು.
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತಿದ್ದಾರೆ. ಬಿಜೆಪಿಯ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆ ಪ್ರತಿಯೊಬ್ಬ ಮಹಿಳೆಯರಿಗೂ ಅರ್ಥ ವಾಗಿದೆ. ಮಹಿಳೆಯರು ಬಿಜೆಪಿ ಸರಕಾರ ವನ್ನು ಬದಲಾಯಿಸಬೇಕೆನ್ನುವ ಆಶಯವನ್ನು ಹೊಂದಿದ್ದಾರೆ ಎಂದರು.
ಸಮಾವೇಶವನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮೈಸೂರು ವಿಭಾಗ ಉಸ್ತುವಾರಿ ನಿಧಿ ಚರ್ತುವೇದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕರಾದ ಸುದರ್ಶನ ಕೌಶಿಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆ ಬೈಲ್, ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ, ವೆರೋನಿಕ ಕರ್ನೇಲಿಯೋ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮೀನಾಕ್ಷಿ ಬನ್ನಂಜೆ, ದಿನಕರ ಹೇರೂರು, ವಿಶ್ವಾಸ್ ಅಮೀನ್, ರೋಷನ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ ಸ್ವಾಗತಿಸಿದರೆ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷೆ ಗೋಪಿ ಕೆ. ನಾಯ್ಕ್ ವಂದಿಸಿದರು. ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.