ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಗಂಗಾಧರ ಗೌಡರ ಮನೆ ಸೇರಿ 3 ಕಡೆ ಐಟಿ ದಾಳಿ

ಬೆಳ್ತಂಗಡಿ : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಗಂಗಾಧರ ಗೌಡವರ ಮನೆಗಳು ಹಾಗೂ ಕಾಲೇಜು ಸೇರಿದಂತೆ ಮೂರು ಸ್ಥಳಗಳಿಗೆ ಸೋಮವಾರ (ಎ.24) ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ನಗರದ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲದಲ್ಲಿರುವ ಪ್ರಸನ್ನ ಇನ್ಸ್ಟಿಟ್ಯೂಷನ್ , ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ಮುಂದುವರಿದಿದೆ.
ಇಂದಬೆಟ್ಟುವಿನಲ್ಲಿರುವ ಮನೆ ಗಂಗಾಧರ ಗೌಡರ ಪುತ್ರ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದ್ದು ಇವರ ಕುಟುಂಬಕ್ಕೆ ಸೇರಿದ ಎಲ್ಲ ಸಂಸ್ಥೆಗಳ ಮೇಲೆ ದಾಳಿ ನಡೆದಿದೆ.
ಇದನ್ನೂ ಓದಿ: ಸೋಮಣ್ಣಗೆ ಪ್ರಚಾರಕ್ಕೆ ಅವಕಾಶ ಮಾಡಿಕೊಡಿ: ವರುಣಾ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಮನವಿ
Next Story