Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನನ್ನ ಅಧಿಕಾರಾವಧಿಯಲ್ಲಿ ಆಗಿರುವ...

ನನ್ನ ಅಧಿಕಾರಾವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿನ ಮೆಟ್ಟಿಲು: ರಮಾನಾಥ ರೈ

24 April 2023 12:18 PM IST
share
ನನ್ನ ಅಧಿಕಾರಾವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿನ ಮೆಟ್ಟಿಲು: ರಮಾನಾಥ ರೈ

ಬಂಟ್ವಾಳ,ಎ.24: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಅಧಿಕಾರಾವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿನ ಮೆಟ್ಟಿಲು ಎಂದು ಮಾಜಿ ಸಚಿವ, ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಅಭ್ಯರ್ಥಿ ಬಿ. ರಮಾನಾಥ ರೈ ಹೇಳಿದ್ದಾರೆ.

ಬರಿಮಾರ್ ಗ್ರಾಮದಲ್ಲಿ ಮನೆಮನೆ ಭೇಟಿ ಮಾಡಿ ಮತಯಾಚನೆ ಮಾಡಿದ ಸಂದರ್ಭ ಮಾತನಾಡಿದ ಅವರು, ಬಂಟ್ವಾಳ ತಾಲೂಕಿನಾದ್ಯಂತ ಬಹುತೇಕ ಪ್ರಗತಿ ಕಾರ್ಯಗಳು ನನ್ನ ಆಡಳಿತ ಅವಧಿಯಲ್ಲೇ ನಡೆದಿವೆ. ಬಿ.ಸಿ. ರೋಡ್ ನಲ್ಲಿರುವ ತಾಲೂಕು ಆಡಳಿತ ಕಚೇರಿಯಾದ ಮಿನಿವಿಧಾನಸೌಧ, ಬಿ.ಸಿ. ರೋಡ್ ನಲ್ಲಿರುವ ಜಿಲ್ಲೆಯಲ್ಲೇ ಅತ್ಯಂತ ಸುಸಜ್ಜಿತ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಪ್ರವಾಸಿ ಬಂಗ್ಲೆ, ಅಂಬೇಡ್ಕರ್ ಭವನ ಮುಂತಾದ ಹಲವು ಆಡಳಿತಾತ್ಮಕ ಕಚೇರಿಗಳು ತಮ್ಮ ಅವಧಿಯಲ್ಲಿ ನಿರ್ಮಿಸಲಾಗಿದೆ.

ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಸುಸಜ್ಜಿತ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ವಸತಿ ನಿವೇಶನ ಹಂಚಿಕೆ, ಮನೆ ನಿರ್ಮಾಣ, ಗುಣಮಟ್ಟದ ಶಿಕ್ಷಣ ವ್ಯವಸ್ಥೆ, ಆರೋಗ್ಯ ಕೇಂದ್ರಗಳನ್ನೂ ದೊಡ್ಡ ಮೊತ್ತದ ಅನುದಾನಗಳನ್ನು ತಂದು ಅಭಿವೃದ್ಧಿ ಪಡಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಆದರೆ ಕಳೆದ ಐದು ವರ್ಷಗಳಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಜನ ತಮ್ಮನ್ನು ಗೆಲ್ಲಿಸುವುದಿಲ್ಲ ಎಂದು ಅರಿತಿರುವ ಬಿಜೆಪಿ ಕಳೆದ ಬಾರಿಗಿಂತಲೂ ಹೆಚ್ಚು ಅಪಪ್ರಚಾರದಲ್ಲಿ ನಿರತವಾಗಿದೆ. ಆದರೆ, ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನ ಈ ಬಾರಿ ಕಾಂಗ್ರೆಸ್ ಅನ್ನು ಭಾರೀ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ರೈ ಭರವಸೆ ವ್ಯಕ್ತಪಡಿಸಿದರು.

ಸಿದ್ದಕಟ್ಟೆ ಚರ್ಚ್‍ನಲ್ಲಿ ಪ್ರಾರ್ಥನೆ: ಚುನಾವಣಾ ಪ್ರಚಾರದ ನಡುವೆ ರಮಾನಾಥ ರೈ ಅವರು ಸಿದ್ದಕಟ್ಟೆಯ ಸಂತ ಪ್ಯಾಟ್ರಿಕ್ ಚರ್ಚ್‍ಗೆ ಭಾನುವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಫಾ. ಡೇನಿಯಲ್ ಡಿಸೋಜ, ಕೆ. ಪಾವ್ಲ್ ಲೋಬೊ, ರೋಶನ್ ಡೇಸಾ, ಪ್ರವೀಣ್ ಕ್ರಾಸ್ತಾ, ಫಿಲಿಪ್ ಮೀನೆಜಸ್, ಸoತೋಷ್ ಮೊರಸ್, ಮೈಕಲ್ ಮೊರಸ್, ಆoತೋನಿ ಡಿಸೋಜ, ಪ್ರೀಮಲ್ ಬರೆಟ್ಟೊ, ರೀಟಾ ಮೀನೆಜಸ್, ಜೇಸನ್ ಫೆರ್ನಾಂಡಿಸ್, ಅಶೋಕ ಪೂಜಾರಿ, ವಸಂತ ಪೂಜಾರಿ, ಗಂಗಯ್ಯ ಪೂಜಾರಿ, ಅಶ್ವಿನ್ ಸಿಕ್ವೇರಾ, ಮ್ಯಾಕ್ಸಿಮ್ ಸಿಕ್ವೇರಾ, ಅರ್ವೀನ್ ಪಿಂಟೋ, ಜಯಕರ ಶೆಟ್ಟಿ, ಮೊಹಮ್ಮದ್ ಝುಬಿ, ಮೈಕಲ್ ಮೆಲ್ಡ್ರಿಸ್, ಕೇಶವ ಪೂಜಾರಿ, ಜಗದೀಶ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

share
Next Story
X