ಬೆಂಗಳೂರಿನಲ್ಲಿ ಮುಂದುವರಿದ ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ; ಮಾರಕಾಸ್ತ್ರಗಳು ಜಪ್ತಿ

ಬೆಂಗಳೂರು, ಎ.24:ರಾಜ್ಯದಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ಮುಂದುವರಿಸಿದ್ದಾರೆ.
ಇಲ್ಲಿನ ಡಿಜೆಹಳ್ಳಿ ಠಾಣಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸುಮಾರು ನೂರಕ್ಕೂ ಅಧಿಕ ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮಾರಕಾಸ್ತ್ರಗಳು, ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಪ್ರಮುಖ ರೌಡಿಗಳಾದ ಇಮ್ರಾನ್, ಅನೀಸ್, ಝಹೀರ್ ಅಬ್ಬಾಸ್, ಹುಸೇನ್ ಶರೀಫ್, ಸಾದಿಕ್, ಶಕೀರ್, ಇರ್ಫಾನ್, ಯೂಸುಫ್, ತೌಫಿಕ್, ನೆಲ್ಸನ್, ಆಸಿಫ್ ಮತ್ತಿತರ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಇನ್ನೂ, ರೌಡಿಶೀಟರ್ ಆಸೀಫ್ ಮನೆಯಲ್ಲಿ 105 ಕೆ.ಜಿ ಗಾಂಜಾ, 8 ಗ್ರಾಂ ಎಂಡಿಎಂಎ, ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
Next Story