ಶಾರ್ಜಾ: ದೋಣಿ ದುರಂತದಲ್ಲಿ ಭಾರತೀಯ ಮೂಲದ ವ್ಯಕ್ತಿ ಸಾವು; ಮಗು ಸಹಿತ ಮೂವರಿಗೆ ಗಾಯ
ಶಾರ್ಜಾ: ಶಾರ್ಜಾದಲ್ಲಿ ನೆಲೆಸಿದ್ದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಖೋರ್ ಫಕ್ಕಾನ್ ಎಂಬಲ್ಲಿ ನಡೆದ ಬೋಟ್ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಒಂದು ಮಗು ಸೇರಿದಂತೆ ಇತರ ಮೂವರು ಗಾಯಗೊಂಡಿದ್ದು, ಅವರಲ್ಲೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಯನ್ನು 38 ವರ್ಷದ ಅಭಿಲಾಷ್ ಎಂದು ಗುರುತಿಸಲಾಗಿದೆ. ಅವರು ತನ್ನ ಸಹೋದ್ಯೋಗಿಗಳೊಂದಿಗೆ ಬೋಟಿಂಗ್ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ. ಬೋಟಿನಲ್ಲಿ 16 ಮಂದಿ ಪ್ರಯಾಣಿಕರಿದ್ದರು.
ಅಭಿಲಾಷ್ ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
Next Story