Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೋಕಾಯುಕ್ತ ದಾಳಿ: ಬಿಬಿಎಂಪಿ ಅಧಿಕಾರಿ...

ಲೋಕಾಯುಕ್ತ ದಾಳಿ: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ 1.40 ಕೋಟಿ ರೂ.ನಗದು ಪತ್ತೆ

24 April 2023 4:00 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲೋಕಾಯುಕ್ತ ದಾಳಿ: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ 1.40 ಕೋಟಿ ರೂ.ನಗದು ಪತ್ತೆ

ಬೆಂಗಳೂರು, ಎ. 24: ಆದಾಯಕ್ಕಿಂತ ಅಧಿಕ ಸಂಪಾದನೆ ಆರೋಪ ಸಂಬಂಧ ರಾಜ್ಯದ ಎಂಟು ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಶೋಧ ಕಾರ್ಯ ಮುಂದುವರೆಸಿದ್ದು, ಈ ನಡುವೆ ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ ಸಂಬಂಧಿಸಿದ ಮೂರು ಸ್ಥಳಗಳಲ್ಲಿ 1.40 ಕೋಟಿ ರೂ. ನಗದು ಪತ್ತೆಯಾಗಿದೆ.

ಸೋಮವಾರ ಮುಂಜಾನೆ ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಶಿವಮೊಗ್ಗ ,ಚಿತ್ರದುರ್ಗ ಸೇರಿದಂತೆ 8 ಜಿಲ್ಲೆಗಳಲ್ಲಿ 20ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಪ್ರಮುಖವಾಗಿ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ, ಎಇಇ ಟಿ.ಹನುಮಂತರಾಯ, ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪತಹಶೀಲ್ದಾರ್ ವಿಜಯಕುಮಾರ್, ಬೀದರ್‍ನ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ, ಕೋಲಾರದ ತಾಲೂಕು ಪಂಚಾಯಿತಿ ಕಾರ್ಯಪಾಲಕ ಅಭಿಯಂತರ ವೆಂಕಟೇಶಪ್ಪ, ನಿವೃತ್ತ ಡಿಸಿಎಫ್ ನಾಗರಾಜ್, ತಹಶೀಲ್ದಾರ್ ಎನ್.ಜೆ.ನಾಗರಾಜ ನಿವಾಸ, ಕಚೇರಿ ಹಾಗೂ ಇತರ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

ನಗದು ಪತ್ತೆ: ಅದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಗಂಗಾಧರಯ್ಯ ವಿರುದ್ಧ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಏಳು ಸ್ಥಳಗಳ ಮೇಲೆ ದಾಳಿ ನಡೆಸಿದರು.

ಮೂರು ಸ್ಥಳಗಳಲ್ಲಿ 1.40 ಕೋಟಿ ನಗದು, ಯಲಹಂಕ, ಜೆ.ಸಿ.ನಗರ ಮತ್ತು ಹೆಬ್ಬಾಳದಲ್ಲಿ 12 ಫ್ಲ್ಯಾಟ್, ನೆಲಮಂಗಲದಲ್ಲಿ 1.5 ಕೋಟಿ ಮೌಲ್ಯದ 5 ಎಕರೆ ಜಮೀನು, ಮಲ್ಲೇಶ್ವರದಲ್ಲಿ 3.5 ಕೋಟಿ ಮೌಲ್ಯದ ನಿವೇಶನ ಹೊಂದಿರುವುದು ಪತ್ತೆಯಾಗಿದೆ. ಮನೆಯಲ್ಲಿ 1 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.

ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಐ.ಎಂ.ನಾಗರಾಜ ಹಾಗೂ ಈ ಹಿಂದೆ ಶಿಕಾರಿಪುರ ತಹಶೀಲ್ದಾರ್ ಆಗಿದ್ದು, ಸದ್ಯ ಹೊಳಲ್ಕೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್.ಜೆ.ನಾಗರಾಜ ಅವರ ಶಿವಮೊಗ್ಗ ಹಾಗೂ ಶಿಕಾರಿಪುರ ಮನೆ, ಕಚೇರಿ, ತೋಟದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.ಐ.ಎಂ.ನಾಗರಾಜ ನಾಲ್ಕು ತಿಂಗಳ ಹಿಂದಷ್ಟೇ ಅರಣ್ಯ ಇಲಾಖೆಯಿಂದ ನಿವೃತ್ತರಾಗಿದ್ದರು. ವಾರದ ಹಿಂದೆ ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ ಅವರ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಗೆ ಸೇರ್ಪಡೆ ಆಗಿದ್ದರು ಎನ್ನಲಾಗಿದೆ.

ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ತಾಪಂ ಕಾರ್ಯಪಾಲಕ ಅಭಿಯಂತರ ವೆಂಕಟೇಶಪ್ಪ ಅವರ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.ಆನಂತರ, ಬಂಗಾರಪೇಟೆ ಪಟ್ಟಣದ ಮೂರು ಕಡೆ ಹಾಗೂ ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿ ಗ್ರಾಮದ 2 ಕಡೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲಿಸಿದರು. ಈವೇಳೆ ಚಿನ್ನಾಭರಣ ಪತ್ತೆಯಾಗಿದೆ.

ಬಿಬಿಎಂಪಿ ಎಇಇ ಟಿ.ಹನುಮಂತರಾಯ ಅವರ ಬೆಂಗಳೂರಿನ ಮನೆ, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೋಚಾಪುರ ಗ್ರಾಮದ ಬಳಿಯ ಫಾರ್ಮ್ ಹೌಸ್ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಎಸ್ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಅದೇ ರೀತಿ, ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್ ವಿಜಯಕುಮಾರ್ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಜೊತೆಗೆ ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ ಅವರ ಬೀದರ್ ಗುರುನಗರದ ಮನೆ, ನೌಬಾದ್‍ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ ಸಂಬಂಧಿಸಿದ ಏಳು ಸ್ಥಳಗಳಲ್ಲಿ ದಾಳಿ ನಡೆಸಿದಾಗ 14 ಫ್ಲ್ಯಾಟ್‍ಗಳು, ನೆಲಮಂಗಲದಲ್ಲಿ 1.5 ಕೋಟಿ ಮೌಲ್ಯದ 5 ಎಕರೆ ಕೃಷಿ ಭೂಮಿ, 3.65 ಕೋಟಿ ಮೌಲ್ಯದ ಮಲ್ಲೇಶ್ವರ ನಿವೇಶನ. 2 ಲಾಕರ್, 1.431 ಕೆಜಿ ಚಿನ್ನಾಭರಣ, 8.7 ಕೆಜಿ ಬೆಳ್ಳಿ, 73 ಲಕ್ಷ ಮೌಲ್ಯದ ವಜ್ರಗಳು, 1.47 ಕೋಟಿ ನಗದು, ವಿದೇಶ ಕರೆನ್ಸಿ 10,298 ಡಾಲರ್ ಸೇರಿದಂತೆ ಇನ್ನಿತರೆ ದುಬಾರಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ.

ಜೆಸ್ಕಾಂ ಎಇಇ ಆಗಿರುವ ಹುಸೇನ್ ಸಾಬ್ ಅವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದ್ದು, ಸೋಮವಾರ ಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯ ಲೋಕಾಯುಕ್ತ ತಂಡಗಳು ಬಳ್ಳಾರಿ ಬುಡಾ ಕಾಂಪ್ಲೆಕ್ಸ್‍ನಲ್ಲಿರುವ ಕಚೇರಿ, ರಾಘವೇಂದ್ರ ಕಾಲೋನಿಯಲ್ಲಿರುವ ಮನೆ ಮತ್ತು ಹುಟ್ಟೂರು ಶಿಡಿಗಿನಮೊಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X