Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈದ್‌ ಹಿನ್ನೆಲೆ: ಸಾಮರಸ್ಯದ ವಿಡಿಯೋ...

ಈದ್‌ ಹಿನ್ನೆಲೆ: ಸಾಮರಸ್ಯದ ವಿಡಿಯೋ ನಿರ್ಮಿಸಿದ ಹಿಂದೂ ಯುವಕನ ಮೇಲೆ ಬಿಜೆಪಿ ಮುಖಂಡರಿಂದ ಹಲ್ಲೆ; ಆರೋಪ

25 April 2023 9:17 AM IST
share
ಈದ್‌ ಹಿನ್ನೆಲೆ: ಸಾಮರಸ್ಯದ ವಿಡಿಯೋ ನಿರ್ಮಿಸಿದ ಹಿಂದೂ ಯುವಕನ ಮೇಲೆ ಬಿಜೆಪಿ ಮುಖಂಡರಿಂದ ಹಲ್ಲೆ; ಆರೋಪ

ಕೊಲ್ಕತ್ತಾ/ ಅಗರ್ತಲಾ: ಉದಯಪುರದ ಬಪನ್ ನಂದಿ (23) ಎಂಬ ಯುವಕ, ಈದ್ ಸಂಭ್ರಮದ ವಿಡಿಯೊದಲ್ಲಿ ನಟಿಸಿದ ಕಾರಣಕ್ಕಾಗಿ ಬಿಜೆಪಿ ಮುಖಂಡರು ಆತನ ಮೇಲೆ ದಾಳಿ ನಡೆಸಿದ್ದಾರೆನ್ನಲಾದ ಘಟನೆ ನಡೆದಿದೆ ಎಂದು newsclick.in ವರದಿ ಮಾಡಿದೆ. 

ಖುಪ್ಲಿಂಗ್ ಪ್ರದೇಶದ ನಿವಾಸಿಯಾದ ಬಪನ್ ನಂದಿ ವ್ಲೋಗಿಂಗ್‍ನಲ್ಲಿ (ವಿಡಿಯೊ ಬ್ಲಾಗಿಂಗ್) ಪರಿಣತಿ ಹೊಂದಿದ್ದ ಹಾಗೂ ವಿಡಿಯೊ ತುಣುಕುಗಳನ್ನು ನಿರ್ಮಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇವರ ವ್ಲಾಗ್‍ಗಳು ರಾಜ್ಯದಲ್ಲಿ ಅತ್ಯಂತ ಜನಪ್ರಿಯವಾಗಿದ್ದವು.

ಶನಿವಾರ ಸ್ಥಳೀಯ ಬಿಜೆಪಿ ಮುಖಂಡ ಹಾಗೂ ಪಂಚಾಯ್ತಿ ಉಪ ಪ್ರಧಾನ ಅನು ಮೂರಾ ಸಿಂಗ್ ಹಾಗೂ ಇತರ ಬಿಜೆಪಿ ಮುಖಂಡರು ಈತನನ್ನು ಕರೆಸಿಕೊಂಡು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಘಟನೆಯ ವಿಡಿಯೊವನ್ನು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದರು ಎನ್ನಲಾಗಿದೆ.

ಯುವಕನನ್ನು ಥಳಿಸಿದ್ದು ಮಾತ್ರವಲ್ಲದೇ ಸಿಂಗ್ ಸ್ಥಳೀಯ ಠಾಣೆಗೆ ನಂದಿ ವಿರುದ್ಧ ದೂರು ನೀಡಿದ್ದರು. ಆ ಬಳಿಕ ಸ್ಥಳೀಯ ಠಾಣೆಯ ಪೊಲೀಸರು ಆತನನ್ನು ಕರೆಸಿಕೊಂಡು ವಿಚಾರಣೆಗೆ ಗುರಿಪಡಿಸಿದರು. 

ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಥ ಮನಃಸ್ಥಿತಿ ಉತ್ತರ ಪ್ರದೇಶ ಅಥವಾ ಗುಜರಾತ್ ಆಡಳಿತದ್ದೇ ವಿನಃ ತ್ರಿಪುರಾದ್ದಲ್ಲ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ನಂದಿ ಸಾಮಾಜಿಕ ಜಾಗೃತಿ ಮೂಡಿಸುವ ಹಲವು ವಿಡಿಯೊಗಳನ್ನೂ ಸೃಷ್ಟಿಸಿದ್ದರು. ಇತ್ತೀಚೆಗೆ ಈದ್ ಶುಭಾಶಯ ಹಾರೈಸುವ ಹಾಗೂ ಹಬ್ಬದ ಸುತ್ತಲಿನ ಹಾಡಿನ ಬಗ್ಗೆ ನಾಲ್ಕು ನಿಮಿಷಗಳ ವಿಡಿಯೊ ಪೋಸ್ಟ್ ಮಾಡಿದ್ದರು. ಈ ವಿಡಿಯೊದಲ್ಲಿ ಧರ್ಮಗಳ ನಡುವೆ ಸಾಮರಸ್ಯವನ್ನು ಬಿಂಬಿಸಿ, ಹಬ್ಬವನ್ನು ಸಂಭ್ರಮಿಸುತ್ತಿರುವ ದೃಶ್ಯ ಇದೆ. ಕೋಮು ಆಧಾರದಲ್ಲಿ ಪರಸ್ಪರ ಕಚ್ಚಾಡಿಕೊಳ್ಳದಂತೆ ಮನವಿ ಮಾಡಲಾಗಿದೆ.

share
Next Story
X