ಬೆಳಗಾವಿ: ಮಾಜಿ ಸಚಿವ ಡಿ.ಬಿ.ಇನಾಮದಾರ್ ನಿಧನ

ಬೆಳಗಾವಿ, ಎ.25: ಬೆಳಗಾವಿಯ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ.ಇನಾಮದಾರ್(74) ಇಂದು ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ. ಇನಾಮದಾರ್ ಕಳೆದೊಂದು ತಿಂಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಡಿ.ಬಿ.ಇನಾಮದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಸಲ ವಿಧಾನಸಭೆ ಪ್ರವೇಶಿಸಿದ್ದರು. 1994ರಲ್ಲಿ ಕಾಂಗ್ರೆಸ್ ಸೇರಿದ್ದ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರೊಂದಿಗೆ ಒಡನಾಟ ಹೊಂದಿದ್ದರು.
1983, 1985ರಲ್ಲಿ ಜನತಾ ಪಕ್ಷದಿಂದ, 1994, 1999, 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಹೀಗೆ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸ, ಎಸ್.ಎಂ.ಕೃಷ್ಣ ಹಾಗೂ ಎಸ್. ಬಂಗಾರಪ್ಪ ಸರಕಾರದಲ್ಲಿ ಸಚಿವರಾಗಿದ್ದರು.
Next Story





