Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪರಿಷ್ಕರಣೆಯಲ್ಲಿ ಲೋಕೋಪಯೋಗಿ ಇಲಾಖೆಯ...

ಪರಿಷ್ಕರಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಂಹಿತೆ ಉಲ್ಲಂಘನೆ

ತುಂಗಾ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಅಂದಾಜು

ಜಿ.ಮಹಾಂತೇಶ್ಜಿ.ಮಹಾಂತೇಶ್25 April 2023 11:15 AM IST
share
ಪರಿಷ್ಕರಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಂಹಿತೆ ಉಲ್ಲಂಘನೆ
ತುಂಗಾ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಅಂದಾಜು

ಬೆಂಗಳೂರು, ಎ.25: ತುಂಗಾ ಮೇಲ್ದಂಡೆ ಯೋಜನೆಗೆ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಭೂ ಪರಿಹಾರ ದರಗಳಂತೆ ಭೂ ಸ್ವಾಧೀನ ಅಂದಾಜನ್ನು ತಯಾರಿಸಿ ಅನುಮೋದನೆ ಪಡೆಯದೇ 9 ವರ್ಷಗಳ ನಂತರ ಅಂದಾಜನ್ನು ಪರಿಷ್ಕರಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಇದು ಲೋಕೋಪಯೋಗಿ ಇಲಾಖೆಯ ಸಂಹಿತೆಯ ಅನುಸಾರ ಇರಲಿಲ್ಲ  ಎಂಬ ಹೊಸ ಅಂಶ ಇದೀಗ ಬಹಿರಂಗವಾಗಿದೆ.

ಸರಕಾರದ ಅನುಮೋದನೆ ಇಲ್ಲದೆಯೇ 702.12 ಕೋಟಿ ರೂ. ಹೆಚ್ಚುವರಿಯಾಗಿ ವೆಚ್ಚ ಮಾಡಿರುವ ಪ್ರಕರಣವು ಹೊರಬಿದ್ದ ಬೆನ್ನಲ್ಲೇ ಇದೀಗ ಭೂಸ್ವಾಧೀನ ಅಂದಾಜನ್ನು 9 ವರ್ಷಗಳ ನಂತರ ಪರಿಷ್ಕರಿಸಲಾಗಿತ್ತು ಎಂಬ ವಿಚಾರವು ಮುನ್ನೆಲೆಗೆ ಬಂದಿದೆ. ಈ ಸಂಬಂಧ "the-file.in" ಸಮಗ್ರ ದಾಖಲೆಗಳನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

‘ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ 2013ರಲ್ಲಿ ಹೊಸ ಕಾಯ್ದೆ ಜಾರಿಯಾಗಿತ್ತು. 
620.08 ಕೋಟಿ ರೂ.ಗಳಷ್ಟು ಭೂ ಸ್ವಾಧೀನ ವೆಚ್ಚಕ್ಕಾಗಿ ಹೆಚ್ಚುವರಿಯಾಗಿದೆ ಎಂದು ಆಡಳಿತ ಇಲಾಖೆ ತಿಳಿಸಿದೆ. ಸರಕಾರದ ಆದೇಶದ ಪ್ರಕಾರ (ಸಂಖ್ಯೆ ಜಸಂಇ 234 ವಿಭ್ಯಾಇ 2013 ದಿನಾಂಕ 05.10.2013) ಈ ಯೋಜನೆಯು 2,561.88 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ಪಡೆಯಲಾಗಿದ್ದು ಭೂ ಸ್ವಾಧೀನ ಕಾಯ್ದೆ 2013ರ ಜಾರಿಯಾದ ನಂತರ ಸದರಿ ಕಾಯ್ದೆಯನ್ವಯ ಭೂ ಪರಿಹಾರ ದರಗಳಂತೆ ಭೂ ಸ್ವಾಧೀನ ಅಂದಾಜನ್ನು ತಯಾರಿಸಿ ಅನುಮೋದನೆ ಪಡೆ ಯದೇ 9 ವರ್ಷಗಳ ನಂತರ ಅಂದಾಜನ್ನು ಪರಿಷ್ಕರಿಸಿ ಸಲ್ಲಿಸಿರುವುದು ಲೋಕೋಪಯೋಗಿ ಇಲಾಖೆ ಸಂಹಿತೆ ಅನುಸಾರ ಇರುವುದಿಲ್ಲ,’ ಎಂದು ಜಲಸಂಪನ್ಮೂಲ ಇಲಾಖೆಯ ಸರಕಾರದ ಕಾರ್ಯದರ್ಶಿಯು 2022ರ ಜನವರಿ 29ರಂದು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸ್ಪಷ್ಟೀಕರಣ ನೀಡಬೇಕು ಎಂದು ನಿರ್ದೇಶಿಸಿದ್ದರು.

ಅಷ್ಟೇ ಅಲ್ಲ ಸಿವಿಲ್ ಕಾಮಗಾರಿಗಳಲ್ಲಿ 183.60 ಕೋಟಿ ರೂ.ಹೆಚ್ಚುವರಿಯಾಗಿದ್ದು ಇದಕ್ಕೆ ಪರಿಷ್ಕೃತ ಅಂದಾಜು ಪಟ್ಟಿಯನ್ನು 2018-19ನೇ ಸಾಲಿನ ದರಗಳನ್ನು ಅಳವಡಿಸಿದ್ದೇ ಕಾರಣ ಎಂದು ನಿಗಮವು ಸಮಜಾಯಿಷಿ ನೀಡಿತ್ತು.

ನಿಗಮದ ಸಮಜಾಯಿಷಿ: ಪ್ರಸ್ತಾಪಿತ ಹೆಚ್ಚುವರಿ ಮೊತ್ತವು ಹೊಸ ಭೂ ಸ್ವಾಧೀನ ಕಾಯ್ದೆ 2013ರಿಂದಾಗಿ ಭೂ ಸ್ವಾಧೀನ ವೆಚ್ಚದಲ್ಲಿ ಹೆಚ್ಚುವರಿಯಾಗಿರುತ್ತದೆ. ಅನುಮೋದಿತ 2,561.88 ಕೋಟಿ ರೂ. 2012-13ನೇ ಸಾಲಿನ ದರಪಟ್ಟಿ ಪ್ರಕಾರ ತಯಾರಿಸಲಾಗಿದ್ದು, ಪ್ರಸ್ತುತ 3,395.02 ಕೋಟಿ ರೂ. ಪರಿಷ್ಕೃತ ಅಂದಾಜು ಆಗಸ್ಟ್ 2018ರಲ್ಲಿ 2018-19ನೇ ಸಾಲಿನ ದರಪಟ್ಟಿಯ ದರಗಳನ್ವಯ ತಯಾರಿಸಲಾಗಿತ್ತು. ದರಸೂಚಿಯ ದರಗಳಲ್ಲಿನ ವ್ಯತ್ಯಾಸದಿಂದಾಗಿ ಹೆಚ್ಚುವರಿಯಾಗಿತ್ತು. ಕಾಮಗಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಸ್ಥಳದ ವಸ್ತು ಸ್ಥಿತಿಗನುಗುಣವಾಗಿ ಕೆಲವು ಹೆಚ್ಚುವರಿ ಕಾಮಗಾರಿಗಳನ್ನು ಅಳವಡಿಸಿಕೊಂಡಿದ್ದರಿಂದಾಗಿ ಅಂದಾಜು ಮೊತ್ತದಲ್ಲಿ ಹೆಚ್ಚುವರಿಯಾಗಿರುತ್ತದೆ.

ಹಾಗೆಯೇ ‘2013ನೇ ಸಾಲಿನ ಹೊಸ ಭೂ ಸ್ವಾಧೀನ ಕಾಯ್ದೆ ಅನ್ವಯ ಭೂಮಿಯನ್ನು ಸ್ವಾಧೀನ ಡಿಸಿಕೊಳ್ಳಬೇಕಾಗಿದ್ದು ನ್ಯಾಯಾಲಯದ ಆದೇಶದ ಮೇರೆಗೆ ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗಿರುವುದರಿಂದ ಇದಕ್ಕೆ 463.50 ಕೋಟಿ ರೂ.ವೆಚ್ಚವಾಗಿರುತ್ತದೆ. ಭೂ ಸ್ವಾಧೀನ ಪ್ರಕ್ರಿಯೆಯು ಹಲವಾರು ಹಂತಗಳನ್ನು ಹೊಂದಿದ್ದು ಅವುಗಳ ಅನುಮೋದನೆ ಪಡೆದು ಪ್ರಸ್ತಾವ ಸಲ್ಲಿಸಿದ್ದರೂ ಸಹ ನಿಗದಿತ ಅವಧಿಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣವಾಗದೇ ಇರುವುದರಿಂದ ನಿಖರವಾಗಿ ಪರಿಷ್ಕೃತ ಮೊತ್ತದ ಅಂದಾಜು ಮಾಡಿ ಸಲ್ಲಿಸಲು ವಿಳಂಬವಾಗಿರುತ್ತದೆ,’ ಎಂದೂ ಸರಕಾರಕ್ಕೆ  ಸಮಜಾಯಿಷಿ ನೀಡಿತ್ತು ಎಂಬುದು ದಾಖಲೆಯಿಂದ ಗೊತ್ತಾಗಿದೆ.

ಆದರೆ ಇದಕ್ಕೆ ಜಲಸಂಪನ್ಮೂಲ ಇಲಾಖೆಯು ಆಕ್ಷೇಪಿಸಿತ್ತು.  ’ಯೋಜನೆಯು 2013ರಲ್ಲೇ ಅನುಮೋದನೆಗೊಂಡಿರುವುದರಿಂದ ಯೋಜನೆಯಡಿ ಎಲ್ಲ ಉಪ ಕಾಮ ಗಾರಿಗಳ ಗುತ್ತಿಗೆಯನ್ನು 2013-14ರಲ್ಲೇ ಟೆಂಡರ್ ಕರೆದು ವಹಿಸಿದ್ದಲ್ಲಿ inlfation index ಪ್ರಕಾರ ಗುತ್ತಿಗೆದಾರರಿಗೆ ಪ್ರತಿ ವರ್ಷದ ದರ ಹೆಚ್ಚಳ ನೀಡಲು ನಿಯಮಗಳಲ್ಲಿ ಅವಕಾಶವಿದೆ. 2018-19ನೇ ಸಾಲಿನ ಅನುಸೂಚಿ ದರಗಳನ್ನು ಅಳವಡಿಸಿ ಅಂದಾಜು ಪಟ್ಟಿ ಪರಿಷ್ಕರಿಸಿದ್ದ ನಿಗಮವು ಇದಕ್ಕೆ ಸವಿವರವಾದ ಸಮರ್ಥನೆಗಳನ್ನು ಸರಕಾರಕ್ಕೆ  ಒದಗಿಸಿರಲಿಲ್ಲ ಎಂಬುದು ಪತ್ರದಿಂದ ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X