ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ಫೈನಲ್: ಟೀಮ್ ಇಂಡಿಯಾ ಪ್ರಕಟಿಸಿದ ಬಿಸಿಸಿಐ

ಹೊಸದಿಲ್ಲಿ: ಇಂಗ್ಲೆಂಡ್ ನಲ್ಲಿ ಆಸ್ಟ್ರೇಲಿಯ ವಿರುದ್ಧ ನಡೆಯುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ಫೈನಲ್ ಗೆ ಬಿಸಿಸಿಐ ಟೀಮ್ ಇಂಡಿಯಾವನ್ನು ಮಂಗಳವಾರ ಪ್ರಕಟಿಸಿದೆ.
ಅಜಿಂಕ್ಯ ರಹಾನೆ ಟೆಸ್ಟ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಓವಲ್ ಕ್ರೀಡಾಂಗಣದಲ್ಲಿ ಜೂನ್ 7ರಿಂದ 11ರ ತನಕ ಭಾರತ-ಆಸ್ಟ್ರೇಲಿಯ ನಡುವೆ ನಡೆಯಲಿದೆ.
ಸದ್ಯ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರರು ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸಿದ್ದರೆ, ಕೋಚಿಂಗ್ ಸಿಬ್ಬಂದಿ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದತ್ತ ಗಮನ ಹರಿಸಿದ್ದಾರೆ.
ಟೆಸ್ಟ್ ತಂಡ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಲ್.ರಾಹುಲ್, ಕೆ.ಎಸ್. ಭರತ್( ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್, ಉಮೇಶ್ ಯಾದವ್ ಹಾಗೂ ಜಯದೇವ್ ಉನದ್ಕಟ್.
Next Story