Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಬಿಜೆಪಿ ಸರಕಾರದಿಂದ 1.5 ಲಕ್ಷ...

ರಾಜ್ಯ ಬಿಜೆಪಿ ಸರಕಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ

''ಜನರ ಅಭಿವೃದ್ಧಿಗೆ ಗ್ಯಾರಂಟಿ ನೀಡಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ''

25 April 2023 5:07 PM IST
share
ರಾಜ್ಯ ಬಿಜೆಪಿ ಸರಕಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ
''ಜನರ ಅಭಿವೃದ್ಧಿಗೆ ಗ್ಯಾರಂಟಿ ನೀಡಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ''

ಮೈಸೂರು: ರಾಜ್ಯದಲ್ಲಿರುವ ಭ್ರಷ್ಟ ಮತ್ತು ಲೂಟಿ ಕೋರ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಜನರ ಅಭಿವೃದ್ಧಿಗೆ ಗ್ಯಾರಂಟಿ ನೀಡಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ  ತನ್ನಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮನವಿ ಮಾಡಿದರು.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿರುವ ಅವರು ಮಂಗಳವಾರ ಟಿ.ನರಸೀಪುರದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶೇ.40 ಭ್ರಷ್ಟಾಚಾರ ಮಾಡಿ 1.5 ಲಕ್ಷ ಕೋಟಿ ಯಷ್ಟು ಲೂಟಿ ಮಾಡಿದೆ. ಇಲ್ಲಿನ ಬಿಜೆಪಿ ಆಡಳಿತದ ಭ್ರಷ್ಟಾಚಾರ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು, ಖಾಸಗಿ ಶಾಲಾ ಮಂಡಳಿಯವರು ಪ್ರಧಾನಮಂತ್ರಿಗಳಿಗೆ ಲಿಖಿತ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ರಾಜ್ಯದಲ್ಲಿ ಅನೇಕ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಲೂಟಿ ಮಾಡಿರುವ 1.5 ಲಕ್ಷ ಕೋಟಿ ರೂ. ಗಳಲ್ಲಿ  ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುವುದು.‌ಇವರು ಲೂಟಿ ಮಾಡಿರುವ ಹಣದಲ್ಲಿ ಉತ್ತಮ ಆಸ್ಪತ್ರೆ, ಶಾಲೆ, 30 ಸಾವಿರ ಸ್ಮಾಟ್೯ ಕ್ಲಾಸ್ ನಿರ್ಮಾಣ ಮಾಡಬಹುದಿತ್ತು. ಜೊತೆಗೆ ಬಡವರಿಗೆ 30 ಲಕ್ಷ ಮನೆ ಕಟ್ಟಿಸಬಹುದಿತ್ತು, ರಾಜ್ಯದ 2240 ಕೀ.ಮಿ ರಸ್ತೆಗಳನ್ನು ಉನ್ನತ ದರ್ಜೆಗೆ ಏರಿಸಬಹುದಿತ್ತು, 750 ಕೀ.ಮಿ.ಮೆಟ್ರೊ ಯೋಜನೆ ಜಾರಿಗೆ ತರಬಹುದಿತ್ತು ಎಂದು ಲೇವಡಿ ಮಾಡಿದರು.

ಬಿಜೆಪಿ ಸರ್ಕಾರ ಪಿಎಸ್ಐ ಹಗರಣ, ಉಪನ್ಯಾಸಕರ ನೇಮಕಾತಿ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ, ಇಂಜಿನಿಯರ್ ಗಳ ನೇಮಕಾತಿಗಳಿಗೆ 20,30,50 ಲಕ್ಷಗಳವರಗೆ ನಿಗದಿ ಮಾಡಿ ಸಾಕಷ್ಟು ಭ್ರಷ್ಟಾಚಾರ ಮಾಡಿದೆ.  ಕರೋನ ಸಂದರ್ಭದಲ್ಲೂ ಸಾವಿರಾರು ಕೋಟಿ ಭ್ರಷ್ಟಾ ಮಾಡಿ ಶಾಲಾ ಮಕ್ಕಳ ಮೊಟ್ಟೆಯಲ್ಲೂ ಕೋಟಿಗಟ್ಟಲೆ ಭ್ರಷ್ಟಾಚಾರ ಮಾಡಿದೆ ಇಂತ ಸರ್ಕಾರ ರಾಜ್ಯದಲ್ಲಿ ಇರಬೇಕೆ ಎಂದು ಪ್ರಶ್ನಿಸಿದರು.

ಯುವಕರು ಉದ್ಯೋಗವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ 2.5. ಲಕ್ಷ ಕೋಟಿ ಉದ್ಯೋಗ ಖಾಲಿ ಇದೆ.ಅದನ್ನು ಭರ್ತಿ ಮಾಡುವ ಕೆಲಸಕ್ಕೆ ಬಿಜೆಪಿ ಸರ್ಕಾರ ಮುಂದಾಗಲಿಲ್ಲ.‌ ಆದರೆ ಜನರ ಬದುಕಿನ ನಡುವೆ ಚೆಲ್ಲಾಟವಾಡಿ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ 100 ರೂ ದಾಟಿದೆ. ಗ್ಯಾಸ್ ಬೆಲೆ 1160 ರೂ. ಗಳಾಗಿದೆ ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವ ಕಾಲ ಬಂದಿದೆ. ಹಾಗಾಗಿ ನಿಮ್ಮ ಬದುಕಿಗೆ ಆಸರೆಯಾಗುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು.

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಮನಸ್ಸು ಬಿಜೆಪಿ ಸರ್ಕಾರಕ್ಕೆ ಇದ್ದರೆ ಕೂಡಲೇ 9 ನೇ ಶೆಡ್ಯೂಲ್ ಗೆ ಸೇರಿಸಿ ಹೆಚ್ಚಳ ಮಾಡಬಹುದಿತ್ತು. ಆದರೆ ಅವತು ಚುನಾವಣಾ ದೃಷ್ಟಿಯಿಂದ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿತಯವುದಾಗಿ ಹೇಳುತ್ತಿದ್ದಾರೆ. ಆದರೆ ಇವರದೇ ಡಬ್ಬಲ್ ಇಂಜಿನ್ ಸರ್ಕಾರ ಎಸ್ಸಿ, ಎಸ್ಟಿ, ಮೀಸಲಾತಿ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದೆ. ಇವರು ಎಸ್ಸಿ,ಎಸ್ಟಿ, ಮೀಸಲಾತಿ ಹೆಚ್ಚಳ ಮಾಡಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದ ಜನ ಸಹಕಾರ ಯೋಜನೆಯಲ್ಲಿ ನಂದಿನಿ ಸಂಸ್ಥೆಯನ್ನು ಬೆಳೆಸಿದ್ದಾರೆ. ಅದೇ ನಂದಿನಿ ಸಂಸ್ಥೆಯನ್ನು ದುರ್ಬಲಗೊಳಿಸಿ ಗುಜರಾತ್ ನ ಅಮುಲ್ ಜೊತೆಗೆ ಸೇರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯಾಗಿ ಎಲ್ಲರೂ ಮುಂದಾಗಿದ್ದಾರೆ. ಇಂತಹ ಸಹಕಾರ ಸಂಸ್ಥೆಯನ್ನು ವಿಲೀನಗೊಳಿಸುವ ಮೂಲಕ ಇಲ್ಲಿನ ಜನರ ಬದುಕನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಎಚ್ಚರಿಸಿದರು.

ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ 90 ಲಕ್ಷ ಹಾಲು ಉತ್ಪಾದನೆಯಾಗುತ್ತಿತ್ತು. ಇದರಿಂದ ಉಳಿದ ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆಯಲ್ಲಿ ನೀಡುವ ಮೂಲಕ ಮಕ್ಕಳ ಪೌಷ್ಠಿಕಾಂಶದ ಬಗ್ಗೆ ಗಮನ ಹರಿಸಲಾಗುತ್ತಿತ್ತು.  ರೈತರಿಗೆ ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಅನ್ನ ಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ, ಸೇರಿದಂತೆ ಹಲವಾರು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾತ ನೀಡಿತ್ತು. ಆದರೆ ಬಿಜೆಪಿ  ಸರ್ಕಾರ ಹಾಲಿನ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 200 ಯುನಿಟ್ ಉಚಿತ ವಿದ್ಯುತ್, 10 ಕೆ.ಜಿ. ಉಚಿತ ಅಕ್ಕಿ, ಗೃಹಿಣಿಯರಿಗೆ 2 ಸಾವಿರ ರೂ. ನಿರುದ್ಯೋಗ ಪದವೀದರರಿಗೆ 3 ಸಾವಿರ ರೂ. ಡಿಪ್ಲಮೊ ಪದವೀದರರಿಗೆ 1.5 ಸಾವಿರ ರೂ. ಗ್ಯಾರಂಟಿ ನೀಡುತ್ತೇವೆ. ಇದರ ಜೊತೆಗೆ ಖಾಲಿ ಇತುವ ಹುದ್ದೆಗಳನ್ನು ಗ್ಯಾರಂಟಿ ತುಂಬುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಟಿ.ನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎಚ್.ಸಿ.ಮಹದೇವಪ್ಪ, ಶಾಸಕರುಗಳಾದ  ತನ್ವೀರ್ ಸೇಠ್, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ, ಹರೀಶ್ ಗೌಡ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಸಿ.ಬಸವೇಗೌಡ, ಸುನೀತಾ ವೀರಪ್ಪ ಗೌಡ, ಸುನೀಲ್ ಬೋಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
Next Story
X