ಪುತ್ತೂರು : ವಿಷ ಸೇವಿಸಿ ಯುವಕ ಆತ್ಮಹತ್ಯೆ

ಪುತ್ತೂರು : ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ಅಳದಂಗಡಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಕಬಕ ಗ್ರಾಮದ ಅಳದಂಗಡಿ ನಿವಾಸಿ ಮನೋರಾಜ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮನೋರಾಜ್ ಅವರು ಮಂಗಳೂರಿನ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಸಂಸ್ಥೆಗೆ ಸಂಬಂಧಿಸಿದ ಸಂಗ್ರಹ ಹಣವನ್ನು ನೀಡದೆ ಬಾಕಿ ಉಳಿಸಿಕೊಂಡಿದ್ದ ಹಿನ್ನಲೆಯಲ್ಲಿ ಅವರನ್ನು ಇತ್ತೀಚೆಗೆ ಸಂಸ್ಥೆಯವರು ಕೆಲಸದಿಂದ ಕೈಬಿಟ್ಟಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಮನನೊಂದ ಮನೋರಾಜ್ ಅವರು ಸೋಮವಾರ ಸಂಜೆ ತಮ್ಮ ಮನೆಯ ಪಕ್ಕದ ಗುಡ್ಡದಲ್ಲಿ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಚಿಂತಾಜಕ ಸ್ಥಿತಿಯಲ್ಲಿದ್ದ ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾದ್ದು, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಮೃತರ ತಾಯಿ ಲೀಲಾವತಿ ಅವರು ನೀಡಿರುವ ದೂರಿನಂತೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story