Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಸವಣ್ಣರ ಸಮಾನತೆಯನ್ನು ನಾನು ಕಾರ್ಯ...

ಬಸವಣ್ಣರ ಸಮಾನತೆಯನ್ನು ನಾನು ಕಾರ್ಯ ರೂಪಕ್ಕೆ ತಂದಿದ್ದೇನೆ: ಸಿಎಂ ಬೊಮ್ಮಾಯಿ

25 April 2023 8:10 PM IST
share
ಬಸವಣ್ಣರ ಸಮಾನತೆಯನ್ನು ನಾನು ಕಾರ್ಯ ರೂಪಕ್ಕೆ ತಂದಿದ್ದೇನೆ: ಸಿಎಂ ಬೊಮ್ಮಾಯಿ

ಧಾರವಾಡ,ಎ. 25: 'ಬಸವಣ್ಣನ ಸಮಾನತೆಯನ್ನು ಕಾರ್ಯರೂಪಕ್ಕೆ ತರುವ ಕೆಲಸ ಮಾಡಿದ್ದೇನೆ. ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇನೆ. ಹಾಗಾಗಿ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ಕೊಡುವ ಕೆಲಸ ಮಾಡಿದೆ. ಜೇನು ಗೂಡಿಗೆ ಕೈ ಹಾಕಬೇಡಿ ಎಂದು ಹೇಳಿದ್ದರು. ಆದರೂ ನನಗೆ ಜೇನು ಕಚ್ಚಿದರೂ ಪರವಾಗಿಲ್ಲ ಎಂದು ದೀನ ದಲಿತರಿಗೆ ಜೇನು ಕೊಟ್ಟಿದ್ದೇನೆ' ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

ಅವರು ಇಂದು ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.

ಹಿಂದೆ ವರ್ಷಗಳಾದರೂ ರೈತರಿಗೆ ಬೆಳೆ ನಾಶಕ್ಕೆ ಪರಿಹಾರ ಬರುತ್ತಿರಲಿಲ್ಲ. ನಮ್ಮ ಕಾಲದಲ್ಲಿ ಕೇವಲ ಒಂದು ತಿಂಗಳ ಒಳಗೆ ಪರಿಹಾರ ನೇರವಾಗಿ ಡಿಬಿಟಿ ಮೂಲಕ ರೈತರ ಅಕೌಂಟ್ ಗೆ ಸೇರುತ್ತಿದೆ. ಇದು ಸಾಧ್ಯವಾಗಿದ್ದು ಡಬಲ್ ಎಂಜಿನ್ ಸರ್ಕಾರದಿಂದ ಎಂದು ಹೇಳಿದರು.

ಧಾರವಾಡ ಗ್ರಾಮಾಂತರ ಜನತೆ ರಾಜಕೀಯವಾಗಿ ಬಹಳ ಬುದ್ಧಿವಂತರಿದ್ದಾರೆ. ಕರಡಿಗುಡ್ಡದ ಗ್ರಾಮಸ್ಥರು ಏನು ತೀರ್ಮಾನ ಮಾಡುತ್ತಾರೆ ಅದು ಇಡೀ ಕ್ಷೇತ್ರದಲ್ಲಿ ಅದು ನಿಲ್ಲುತ್ತದೆ. ಅಮೃತ ದೇಸಾಯಿ ಅವರು ಎರಡು ಬಾರಿ ಚುನಾವಣೆ ನಿಂತು ಸೋತಿದ್ದಾರೆ. ಇಷ್ಟು ವರ್ಷದಲ್ಲಿ ಜನ ಪಟ್ಟಿರುವ ಕಷ್ಟವನ್ನು ಈ ಬಾರಿ ತಾನು ತೀರಿಸಬೇಕು ಎಂದು ಅಮೃತ ದೇಸಾಯಿ ಅವರು ಹಗಲು ರಾತ್ರಿ ಕಷ್ಟಪಟ್ಟಿದ್ದಾರೆ. ದೊಡ್ಡ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಕರಡಿಗುಡ್ಡದ ಮಲ್ಲಿಕಾರ್ಜುನ ದೇವಸ್ಥಾನ ಅಭಿವೃದ್ಧಿ ಆಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

''ರೈತರ ಸಂಕಷ್ಟಕ್ಕೆ ಸಕಾಲದಲ್ಲಿ ನಾವು ಧಾವಿಸುತ್ತೇವೆ''

ಪ್ರವಾಹದಲ್ಲಿ ಬೆಳೆ ನಾಶ ಮತ್ತು ಮನೆ ಹಾನಿಗೊಳಗಾಗಿತ್ತು. ಇದಕ್ಕೆ ಪರಿಹಾರವನ್ನು ಎರಡು ಲಕ್ಷದಿಂದ ಐದು ಲಕ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ನಾನು ಮುಖ್ಯಮಂತ್ರಿ ಆದ ಮೇಲೆ ಮತ್ತೆ ಬಂದ ಪ್ರವಾಹದಲ್ಲಿ ಆದ ಬೆಳೆ ಹಾನಿಗೆ ನಾವು ಕೇಂದ್ರ ಸರ್ಕಾರದ ಪರಿಹಾರಕ್ಕೆ ಸಮನಾದ ಮೊತ್ತ ಸೇರಿಸಿ ಡಬಲ್ ಪರಿಹಾರ ನೀಡಿದ್ದೇವೆ. ರೈತರು ಸಂಕಷ್ಟದಲ್ಲಿದ್ದಾಗ ಅವರ ಪರವಾಗಿ ಧಾವಿಸುವವರು ನಾವು. ಅಕ್ಕಿ, ರಾಗಿ, ಜೋಳ, ತೊಗರಿ ಬೇಳೆ, ಭತ್ತದ ಬೆಲೆ ಕುಸಿದಾಗ ಬೆಂಬಲ ಬೆಲೆ ನೀಡಿ ಖರೀದಿ ಮಾಡಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 54  ಲಕ್ಷ ರೈತರಿಗೆ 16000 ಕೋಟಿ ರೂ. ನೇರ ಡಿಬಿಟಿ ಮಾಡಿದ್ದೇವೆ. ಪ್ರವಾಹ ಸಂದರ್ಭದಲ್ಲಿ ರೂ 2800 ಕೋಟಿ ಗಳನ್ನು 47 ಲಕ್ಷ ರೈತರಿಗೆ ಡಿಬಿಟಿ ಮೂಲಕ ಪರಿಹಾರ ನೀಡಿದ್ದೇವೆ ಎಂದು ಹೇಳಿದರು.

share
Next Story
X