ಬೈಕ್ ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ಭಿಕ್ಷುಕ ಮೃತ್ಯು

ಗಂಗೊಳ್ಳಿ: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮರವಂತೆ ಗ್ರಾಮದ ಮಹಾರಾಜಸ್ವಾಮಿ ಶ್ರೀವರಹ ದೇವಸ್ಥಾನದ ಬಳಿ ಎ.25ರಂದು ಬೆಳಗ್ಗೆ ನಡೆದಿದೆ.
ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ದಾಟಲು ನಿಂತಿದ್ದ ಅಪರಿಚಿತ ಭಿಕ್ಷುಕ ರೊಬ್ಬರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಅಪಘಾತದಿಂದ ಬೈಕ್ ಸವಾರ ಹರ್ಷ ಎಂಬವರು ಕೂಡ ಗಾಯಗೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story