Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಸ್ತೆ ಅಪಘಾತದಿಂದ ಮೆದುಳು...

ರಸ್ತೆ ಅಪಘಾತದಿಂದ ಮೆದುಳು ನಿಷ್ಕ್ರೀಯಗೊಂಡ ಭದ್ರಾವತಿ ಯುವಕನ ಅಂಗಾಂಗಗಳ ದಾನ

25 April 2023 9:22 PM IST
share
ರಸ್ತೆ ಅಪಘಾತದಿಂದ ಮೆದುಳು ನಿಷ್ಕ್ರೀಯಗೊಂಡ ಭದ್ರಾವತಿ ಯುವಕನ ಅಂಗಾಂಗಗಳ ದಾನ

ಉಡುಪಿ, ಎ.25: ಕಳೆದ ಶನಿವಾರ ಭದ್ರಾವತಿ ತಾಲೂಕಿನ ಚೆನ್ನಗಿರಿಯಲ್ಲಿ ರಸ್ತೆ ಅಪಘಾತಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾದ 21 ವರ್ಷ ಪ್ರಾಯದ ಯುವಕ ಚಿಕಿತ್ಸೆಗೆ ಸ್ಪಂಧಿಸದೇ ಮೆದುಳು ನಿಷ್ಕ್ರೀಯಗೊಂಡ ಕಾರಣ ಕುಟುಂಬದವರು ಆತನ ಅಂಗಾಂಗ ದಾನಕ್ಕೆ ನಿರ್ಧರಿಸಿದ ಹಿನ್ನೆಲೆಯಲ್ಲಿ ಏಳು ಮಂದಿ ರೋಗಿಗಳ ಜೀವ ಉಳಿಸಲು ಸಹಾಯವಾಗಿದೆ.

21 ವರ್ಷ ಪ್ರಾಯದ ಉಲ್ಲಾಸ್ ಆರ್ ಇವರು ಎ.22ರ ಅಪರಾಹ್ನ 3:00 ಗಂಟೆ ಸುಮಾರಿಗೆ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿ ಅಪಘಾತಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ  ಮರುದಿನ ಬೆಳಗ್ಗೆ 10:47ಕ್ಕೆ  ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ಗ್ರಾಮದ ನೀರಗುಂಡಿ ಅಂಚೆ ರಾಜಪ್ಪ ಎಂಬವರ ಮಗನಾದ ಉಲ್ಲಾಸ್ ಅಪಘಾತದಿಂದ ತೀವ್ರತರದ ಗಾಯವನ್ನು ಹೊಂದಿದ್ದರು. ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ,  ಉಲ್ಲಾಸ್ ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. 

ಇದರಿಂದ ಮಾನವ ಅಂಗಾಂಗ ಕಸಿ ಕಾಯ್ದೆ 1994ರ ಅನುಸಾರ  ಉಲ್ಲಾಸ್  ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು. ಮೊದಲ ಬಾರಿಗೆ ಎ.24ರ ರಾತ್ರಿ  8:30ಕ್ಕೆ ಹಾಗೂ ಮತ್ತೊಮ್ಮೆ ಎ.25ರ ಮುಂಜಾನೆ 3:23ಕ್ಕೆ. 
ಬಳಿಕ ಉಲ್ಲಾಸ್ ಅವರ ತಂದೆ ರಾಜಪ್ಪ ಮತ್ತು ಅವರ ಕುಟುಂಬ ಸದಸ್ಯರು ಇತರ  ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ದಾನ ಮಾಡಿದ ಹೃದಯ, ಶ್ವಾಸಕೋಶಗಳು, ಮೂತ್ರಪಿಂಡಗಳು, ಯಕೃತ್ತು ಮತ್ತು ಎರಡು ಕಾರ್ನಿಯಾ ಗಳು ಒಟ್ಟು 7 ಮಂದಿ ರೋಗಿಗಳ ಜೀವ ಉಳಿಸಲು ಸಹಾಯವಾಯಿತು. 

ಜೀವನ ಸಾರ್ಥಕತೆ ಪ್ರೋಟೋಕಾಲ್‌ಗಳು ಮತ್ತು ನಿರ್ಧಾರಗಳ ಪ್ರಕಾರ, ಶ್ವಾಸಕೋಶಗಳನ್ನು ಅಪೊಲೊ ಆಸ್ಪತ್ರೆ ಚೆನ್ನೈ, ಯಕೃತ್‌ನ್ನು ಬೆಂಗಳೂರಿನ ಅಸ್ಟರ್ ಸಿಎಂಐ ಆಸ್ಪತ್ರೆ, ಒಂದು ಮೂತ್ರಪಿಂಡವನ್ನು ಮಂಗಳೂರಿನ ಎ.  ಜೆ. ಆಸ್ಪತ್ರೆ ಮತ್ತು ಎರಡು ಕಾರ್ನಿಯಾಗಳು ಹಾಗೂ ಒಂದು ಮೂತ್ರಪಿಂಡ ವನ್ನು ಮಣಿಪಾಲ ಕಸ್ತೂರ್ಬಾ  ಆಸ್ಪತ್ರೆಯಲ್ಲಿರುವ ನೋಂದಾಯಿತ  ರೋಗಿಗಳಿಗೆ ಬಳಸಲಾಯಿತು.

ಮಗನ ಅಂಗಾಂಗಗಳ ದಾನದ ಕುರಿತು ಮಾತನಾಡಿದ ರಾಜಪ್ಪ, ಇದೊಂದು ಪುಣ್ಯದ ಕೆಲಸ ಎಂದು ತಾವು ಭಾವಿಸುತ್ತೇವೆ. ತನ್ನ ಮಗ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ ಎಂದು ನುಡಿದರು.

ಉಲ್ಲಾಸ್ ಕುಟುಂಬದ ಈ ಉದಾತ್ತ ನಿರ್ಧಾರ  ಜನರ ಬದಲಾಗುತ್ತಿರುವ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಸ್ವಾಗತಾರ್ಹ ಬದಲಾವಣೆಯಾಗಿದೆ ಮತ್ತು ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಇಂತಹ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ.  ಇನ್ನಷ್ಟು  ಜನರು ಇದನ್ನು ಅನುಕರಿಸುವ ಅಗತ್ಯವಿದೆ ಎಂದು ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ ಶೆಟ್ಟಿ ಹೇಳಿದರು.

ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು ಎಂದು ಕೆಎಂಸಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

share
Next Story
X