Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೌಹಾರ್ದತೆಯ ಮಂಡ್ಯ ಜಿಲ್ಲೆಗೆ...

ಸೌಹಾರ್ದತೆಯ ಮಂಡ್ಯ ಜಿಲ್ಲೆಗೆ ಆದಿತ್ಯನಾಥರ ದ್ವೇಷದ ಉಪದೇಶ ಬೇಕಾಗಿಲ್ಲ: ಸಿಪಿಎಂ

25 April 2023 9:24 PM IST
share
ಸೌಹಾರ್ದತೆಯ ಮಂಡ್ಯ ಜಿಲ್ಲೆಗೆ ಆದಿತ್ಯನಾಥರ ದ್ವೇಷದ ಉಪದೇಶ ಬೇಕಾಗಿಲ್ಲ: ಸಿಪಿಎಂ

ಮಂಡ್ಯ, ಎ.25: ಸೌಹಾರ್ದತೆಯ ಮಂಡ್ಯ ಜಿಲ್ಲೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥರ ದ್ವೇಷದ ಉಪದೇಶ ಬೇಕಾಗಿಲ್ಲ. ಮೈಯೆಲ್ಲಾ ದ್ವೇಶವನ್ನೇ ಕಾರುವ ಕಾವಿಧಾರಿಯ ಆಡಳಿತ ಮಂಡ್ಯ ಜಿಲ್ಲೆಗೆ ಮಾದರಿಯಲ್ಲ. ಇವರ ಮಾತುಗಳಿಗೆ ಜಿಲ್ಲೆಯ ಜನತೆ ಕಿವಿಗೊಡಬಾರದು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ಮನವಿ ಮಾಡಿದೆ.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ನೆಲ ಕಚ್ಚಿದೆ. ಉನ್ನಾವ್ ಅತ್ಯಚಾರ ಪ್ರಕರಣದಲ್ಲಿ ಅತ್ಯಾಚಾರಿಗಳು ಹೇಳಿದಂತೆ ಕೇಳಲಿಲ್ಲ ಎಂಬ ಕಾರಣಕ್ಕೆ ಸಂತ್ರಸ್ತೆಯ ಕುಟುಂಬಕ್ಕೆ ಬೆಂಕಿ ಇಡಲಾಗಿದೆ. ಸಂತ್ರಸ್ತೆಯ ತಂದೆ, ತಾಯಿ ಮತ್ತು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹಸುಗೂಸುಗಳನ್ನು ಬೆಂಕಿಗೆ ಎಸೆಯಲಾಗಿದೆ. ಇಂತಹ ಮಾದರಿಯನ್ನು ಮಂಡ್ಯಕ್ಕೂ ಹೇಳಿ ಕೊಡಲು ಯೋಗಿ ಆದಿತ್ಯನಾಥರು ಆಗಮಿಸುತ್ತಿದ್ದಾರೆಯೆ? ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಟೀಕಿಸಿದ್ದಾರೆ.

ಪೊಲೀಸರ ವಶದಲ್ಲಿರುವಾಗಲೇ ಆರೋಪಿಗಳನ್ನು ಬೀದಿಯಲ್ಲಿ ಗುಂಡಿಟ್ಟು ಕೊಲ್ಲುವ ಹೀನಾಯ ಪರಿಸ್ಥಿತಿ ಉತ್ತರ ಪ್ರದೇಶದಲ್ಲಿ ಇದೆ. ಮಾಜಿ ಲೋಕಸಭಾ ಸದಸ್ಯ, ರೌಡಿ ಶೀಟರ್ ಅತೀಕ್ ಅಹ್ಮದ್ ಮತ್ತವನ ಸಹೋದರನನ್ನು ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೇ ಹೊರಗಿನವರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ರೌಡಿಗಳಾರು? ಪೊಲೀಸರಾರು? ಎಂಬುದೇ ತಿಳಿಯದಂತೆ ಆದಿತ್ಯನಾಥರ ಆಡಳಿತ ಇದೆ. ಇಂತವರಿಂದ ಮಂಡ್ಯದ ಜನತೆಗೆ ಯಾವ ಉಪದೇಶ ಕೊಡಿಸುತ್ತೀರಿ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವವಾದಿ ಶಕ್ತಿಗಳು, ನಿರ್ಭೀತ ಪತ್ರಕರ್ತರ ಮೇಲೆ ದಾಳಿ ನಡೆಸಿ ಅವರನ್ನು ಜೈಲಿಗಟ್ಟುವ ಪಾಠಶಾಲೆಯಂತೆ ಉತ್ತರ ಪ್ರದೇಶ ಆದಿತ್ಯನಾಥರ ಆಳ್ವಿಕೆಯಲ್ಲಿ ಬದಲಾಗಿದೆ. ದೇಶದ ಬಹು ಸಂಸ್ಕೃತಿ, ಸೌಹಾರ್ದತೆ, ಸಾಮರಸ್ಯದ ಮೇಲೆ ದಾಳಿ ಮಾಡುವಲ್ಲಿ ಆದಿತ್ಯನಾಥರ ಆಡಳಿತ ಮುಂಚೂಣಿಯಲ್ಲಿದೆ. ಇದು ಮಂಡ್ಯದ ಜನರಿಗಂತೂ ಆದರ್ಶವಲ್ಲ, ಇಂತಹ ವ್ಯಕ್ತಿಗಳನ್ನು ಕರೆಸಿ ಮಾತನಾಡಿಸುವ ಬಿಜೆಪಿ ಅಭ್ಯರ್ಥಿಗಳನ್ನು ತಿರಸ್ಕರಿಸಬೇಕೆಂದು ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಟಿಪ್ಪು ಸುಲ್ತಾನರ ಜಾಮಿಯಾ ಮಸೀದಿ ಮೇಲಿನ ದಾಳಿ, ಉರೀಗೌಡ ಮತ್ತು ನಂಜೇಗೌಡ ಎಂಬ ನಕಲಿ ವ್ಯಕ್ತಿಗಳ ಸೃಷ್ಟಿ, ಇದ್ರೀಸ್ ಪಾಷಾ ಹತ್ಯೆ ಇಂತವುಗಳಿಂದ ಚುನಾವಣಾ ಲಾಭ ಪಡೆಯಲು ಸಾಧ್ಯವಾಗದು ಎಂಬ ಹತಾಶೆಯಿಂದ ಮಂಡ್ಯ ಜಿಲ್ಲಾ ಬಿಜೆಪಿ ಯೋಗಿ ಆದಿತ್ಯನಾಥರ ಮೊರೆ ಹೋಗಿದೆ. ಇದನ್ನು ಕೂಡ ಮಂಡ್ಯ ಜಿಲ್ಲೆಯ ಜನತೆ ವ್ಯರ್ಥ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

share
Next Story
X