ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದು, ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಸಕಾಲಕ್ಕೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಣ್ಣೂರು ಬಳ್ಳೂರುಗುಡ್ಡೆಯ ನುಮಾನ್ ಯಾನೆ ಕೆ. ನುಮಾನುಲ್ಲಾ ಎಂಬಾತನನ್ನು ಬಂದರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





