Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉತ್ತರ ಶ್ರೀಲಂಕಾದಲ್ಲಿ ತಮಿಳು ಪಕ್ಷಗಳ...

ಉತ್ತರ ಶ್ರೀಲಂಕಾದಲ್ಲಿ ತಮಿಳು ಪಕ್ಷಗಳ ಪ್ರತಿಭಟನೆ; ಜನಜೀವನ ಅಸ್ತವ್ಯಸ್ತ

ನೂತನ ಭಯೋತ್ಪಾದನಾ ನಿಗ್ರಹ ಕಾಯ್ದೆಗೆ ವಿರೋಧ

25 April 2023 10:42 PM IST
share
ಉತ್ತರ ಶ್ರೀಲಂಕಾದಲ್ಲಿ ತಮಿಳು ಪಕ್ಷಗಳ ಪ್ರತಿಭಟನೆ; ಜನಜೀವನ ಅಸ್ತವ್ಯಸ್ತ
ನೂತನ ಭಯೋತ್ಪಾದನಾ ನಿಗ್ರಹ ಕಾಯ್ದೆಗೆ ವಿರೋಧ

ಕೊಲಂಬೊ,ಎ.25 : ನೂತನ ಭಯೋತ್ಪಾದನಾ ನಿಗ್ರಹ ವಿಧೇಯಕದ ವಿರುದ್ಧ  ತಮಿಳು ಪಕ್ಷಗಳ ಒಕ್ಕೂಟವಾದ ತಮಿಳು ರಾಷ್ಟ್ರೀಯ ಮೈತ್ರಿಕೂಟವು ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀಲಂಕಾದ ಉತ್ತರ ಹಾಗೂ ಪೂರ್ವ ಪ್ರಾಂತಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ವಿವಾದಾತ್ಮಕ  1979ರ ಭಯೋತ್ಪಾದನೆ ತಡೆ ಕಾಯ್ದೆಯ ಬದಲಿಗೆ ನೂತನ ಭಯೋತ್ಪಾದಕ ನಿಗ್ರಹ ಕಾಯ್ದೆ (ಎಟಿಎ)ಯನ್ನು ಜಾರಿಗೆ ತರುವ ಉದ್ದೇಶವನ್ನು ಶ್ರೀಲಂಕಾ ಸರಕಾರ ಹೊಂದಿದೆ. 1979ರಲ್ಲಿ ಪ್ರತ್ಯೇಕತಾವಾದಿ ತಮಿಳು ಬಂಡುಕೋರರ ಗುಂಪುಗಳು ನಡೆಸುತ್ತಿದ್ದ ಹಿಂಸಾಚಾರವನ್ನು ಹತ್ತಿಕ್ಕಲು ಭಯೋತ್ಪಾದನೆ ನಿಗ್ರಹ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು.

80ರ ದಶಕದಲ್ಲಿ ಎಲ್ಟಿಟಿಇ ಬಂಡುಕೋರರ ಭದ್ರಕೋಟೆಯಾಗಿದ್ದ ಉತ್ತರ ಜಾಫ್ನಾದ ತೆನ್ಮಾರಚ್ಚಿ, ಕೊಡಿಕಾಮಮ್ ಹಾಗೂ ಚಾವಕಚ್ಚೇರಿಗಳಲ್ಲಿ ಸಂಪೂರ್ಣ ಬಂದ್ ಆಚರಿಸಲಾಗಿದ್ದು, ವಸ್ತುಶಃ ಜನಜೀವನ ಸ್ತಬ್ಧಗೊಂಡಿತ್ತು., ಆರೋಪಿಗಳ ವಿರುದ್ಧ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸದೆಯೇ ಅವನ್ನು ಹಲವಾರು ವರ್ಷಗಳ ಕಾಲ ಜೈಲಿನಲ್ಲಿಡುವುದಕ್ಕೆ ಅವಕಾಶ ನೀಡುವ ಹಾಲಿ ಭಯೋತ್ಪಾದನೆ ತಡೆ ಕಾಯ್ದೆಯ (ಪಿಟಿಎಒ) ನಿಯಮಾವಳಿಗಳ ನ್ನು ಅಂತಾರಾಷ್ಟೀಯ ಮಾನವಹಕ್ಕುಗಳ ಸಂಘಟನೆಗಳು ಹಾಗೂ ತಮಿಳು ರಾಜಕೀಯ ಪಕ್ಷಗಳು ಪ್ರಬಲವಾಗಿ ವಿರೋಧಿಸುತ್ತಾ ಬಂದಿವೆ.

ಆದಾಗ್ಯೂ ನೂತನ ಭಯೋತ್ಪಾದನಾ ನಿಗ್ರಹ ಕಾಯ್ದೆಯು, ಹಾಲಿ ಭಯೋತ್ಪಾದನಾ ತಡೆ ಕಾಯ್ದೆಗಿಂತಲೂ ಕಠೋರವಾಗಿದೆಯೆಂದು ಅವು ಅಸಮಾಧಾನ ವ್ಯಕಪಡಿಸಿವೆ.

ಅಲ್ಪಸಂಖ್ಯಾತ ತಮಿಳು ಹಾಗೂ ಮುಸ್ಲಿಂ ರಾಜಕೀಯ ಪಕ್ಷಗಳಲ್ಲದೆ ಕಾರ್ಮಿಕ ಒಕ್ಕೂಟ, ಶ್ರೀಲಂಕಾದ ಪ್ರತಿಪಕ್ಷಗಳಿಂದಲೂ ಎಟಿಎ ಕಾಯ್ದೆಗೆ ಪ್ರಬಲ ವಿರೋಧ ವ್ಯಕ್ತವಾಗಿದೆ. ಸರಕಾರದ ವಿರುದ್ಧ ಪ್ರತಿಭಟನೆ ನಡೆಸುವವರ ವಿರುದ್ಧ ಈ ಕಾಯ್ದೆಯಡಿ ಭಯೋತ್ಪಾದನೆಯ ದೋಷಾರೋಪ ಹೊರಿಸಲು ಅವಕಾಶ ನೀಡುತ್ತದೆ ಎಂದು ಅವು ಆಕ್ರೋಶ ವ್ಯಕ್ತಪಡಿಸಿವೆ.

share
Next Story
X