Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆರ್ಥಿಕ ಇಲಾಖೆಯ ಅನುಮತಿ ಪಡೆಯದೆ...

ಆರ್ಥಿಕ ಇಲಾಖೆಯ ಅನುಮತಿ ಪಡೆಯದೆ ಅನುಪಯುಕ್ತ ಪೀಠೋಪಕರಣಗಳ ವಿಲೇವಾರಿ

ಲೆಕ್ಕಪರಿಶೋಧಕರಿಂದ ಬೆಳಕಿಗೆ

ಜಿ.ಮಹಾಂತೇಶ್ಜಿ.ಮಹಾಂತೇಶ್26 April 2023 8:48 AM IST
share
ಆರ್ಥಿಕ ಇಲಾಖೆಯ ಅನುಮತಿ ಪಡೆಯದೆ ಅನುಪಯುಕ್ತ ಪೀಠೋಪಕರಣಗಳ ವಿಲೇವಾರಿ
ಲೆಕ್ಕಪರಿಶೋಧಕರಿಂದ ಬೆಳಕಿಗೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಸಚಿವಾಲಯಕ್ಕೆ ಸೇರಿರುವ ಅನುಪಯುಕ್ತ ಪೀಠೋಪಕರಣಗಳು ಮತ್ತು ಉಪಕರಣಗಳನ್ನು ವಿಲೇವಾರಿ ಮಾಡುವ ಮುನ್ನ ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆದಿರಲಿಲ್ಲ ಎಂದು ಲೆಕ್ಕಪರಿಶೋಧಕರು ಬೆಳಕಿಗೆ ತಂದಿದ್ದಾರೆ.

ಕರ್ನಾಟಕ ವಿಧಾನಪರಿಷತ್ ಸಚಿವಾಲಯಕ್ಕೆ ಸಂಬಂಧಿಸಿದಂತೆ 2013-14ರಿಂದ 2014-15ರ ಅವಧಿಯಲ್ಲಿ ಲೆಕ್ಕಪರಿಶೋಧನೆ ಮಾಡಿರುವ ಲೆಕ್ಕಪರಿಶೋಧಕರು ಸರಕಾರದ ಆದೇಶ ಪಡೆಯದೇ ಪೀಠೋಪಕರಣಗಳು ಮತ್ತು ಇತರ ಉಪಕರಣಗಳನ್ನು ಚಾರಿಟೇಬಲ್ ಸಂಸ್ಥೆಗಳಿಗೆ ನೀಡಿರುವುದನ್ನೂ ಪತ್ತೆ ಹಚ್ಚಿದ್ದಾರೆ. ಇದರ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಉಪಕರಣಗಳ ವಿಲೇವಾರಿಯಿಂದ ಬಂದ ಮೊತ್ತವನ್ನು ರಾಜ್ಯದ ಸಂಚಿತ ನಿಧಿಗೆ ಜಮೆ ಮಾಡಬೇಕಾದ್ದರಿಂದ ಈ ವಿಷಯದಲ್ಲಿ ಅಗತ್ಯವಿದ್ದ ಆರ್ಥಿಕ ಇಲಾಖೆಯ ಅನುಮತಿಯನ್ನು ಹೊಂದಿರುವುದಿಲ್ಲ ಎಂದು ವರದಿಯಲ್ಲಿ ವಿವರಿಸಲಾಗಿದೆ.

ದುರಸ್ತಿಗೆ ಅರ್ಹವಿದ್ದ ಉಪಕರಣಗಳನ್ನು ವಿಲೇವಾರಿಗೂ ಪೂರ್ವದಲ್ಲಿ ಇಲಾಖಾ ಮುಖ್ಯಸ್ಥರು 34ಬಿ ನಮೂನೆಯಲ್ಲಿ ದಾಖಲಿಸಿರುವುದಿಲ್ಲ. ದಾಸ್ತಾನಿನ ಮೌಲ್ಯವನ್ನು ನಮೂದಿಸಿರುವುದಿಲ್ಲ ಎಂದು ಆಕ್ಷೇಪಿಸಿದೆ.

ಕರ್ನಾಟಕ ಆರ್ಥಿಕ ಸಂಹಿತೆಯ ನಿಯಮ 168(b)(ii)ರ ರೀತ್ಯಾ 34ಬಿ ನಮೂನೆಯನ್ನು ಲೆಕ್ಕಪರಿಶೋಧಕರಿಗೆ ಒದಗಿಸಿರುವುದಿಲ್ಲ. ರಾಜ್ಯದಲ್ಲಿ ಹಲವಾರು ಚಾರಿಟೇಬಲ್ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದ್ದರೂ, ಎರಡೂ ಬಾರಿ ಒಂದೇ ಸಂಸ್ಥೆಗೆ ಅನುಪಯುಕ್ತ ಸಾಮಗ್ರಿಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಿರುವುದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಅದೇ ರೀತಿ ಕರ್ನಾಟಕ ವಿಧಾನಪರಿಷತ್ ಸಚಿವಾಲಯು ವ್ಯಾಪ್ತಿಯಲ್ಲಿ ವ್ಯಾಪಾರ ಮಾಡಲು ಹೊಟೇಲ್ ನಿಸರ್ಗದವರಿಗೆ ಬಾಡಿಗೆಗೆ ನೀಡಲಾಗಿತ್ತು. ಆದರೆ ಇವರಿಂದ ವಿದ್ಯುಚ್ಛಕ್ತಿ ಬಿಲ್‌ನಲ್ಲಿನ ಮೊತ್ತಕ್ಕಿಂತಲೂ ಕಡಿಮೆ ವಸೂಲಾತಿ ಮಾಡಿತ್ತು. ಈ ಹೊಟೇಲ್‌ಗೆ ಬಾಡಿಗೆಗೆ ನೀಡಿದ್ದ ಜಾಗಕ್ಕೆ ಲೋಕೋಪಯೋಗಿ ಇಲಾಖೆಯು ನಿಗದಿಪಡಿಸಿರುವ ಬಾಡಿಗೆಯೊಂದಿಗೇ ವಿದ್ಯುಚ್ಛಕ್ತಿ ಮತ್ತು ನೀರಿನ ಬಿಲ್‌ನ್ನು ಪ್ರತೀ ತಿಂಗಳೂ ಪಾವತಿಸಬೇಕಿತ್ತು. ಆದರೆ ಸಚಿವಾಲಯವು ವಿದ್ಯುಚ್ಛಕ್ತಿ ಬಿಲ್‌ನ್ನು ಮೀಟರಿಗನುಣವಾಗಿ ವಸೂಲಾತಿ ಮಾಡದೆಯೇ ಪ್ರತಿ ಯೂನಿಟ್‌ಗೆ 2,500 ರೂ.ನಂತೆ ನಿಗದಿಪಡಿಸಿ ವಸೂಲಾತಿ ಮಾಡಲಾಗಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಕರ್ನಾಟಕ ವಿಧಾನಪರಿಷತ್ ಸಚಿವಾಲಯದ ಕೊಠಡಿಗಳ ನವೀಕರಣ ಕಾಮಗಾರಿಯನ್ನು ವಿಭಜಿಸಿ ನೀಡಿದ್ದರೂ ಕೆಟಿಪಿಪಿ ಕಾಯ್ದೆ ಪಾಲನೆ ಮಾಡಿಲ್ಲದಿರುವುದು, ಕೆ.ಆರ್.ಐ.ಡಿ.ಎಲ್ ನಿಂದ ಬಳಕೆ ಪ್ರಮಾಣ ಪತ್ರವನ್ನೂ ಪಡೆದಿರಲಿಲ್ಲ.  ಕಾರ್ಯಾದೇಶದಲ್ಲಿ ಉಲ್ಲೇಖಿಸಲಾದ ದಾಸ್ತಾನು/ಪೀಠೋಪಕರಣಗಳನ್ನು ಭೌತಿಕವಾಗಿ ದಾಸ್ತಾನಿಗೆ ತೆಗೆದುಕೊಂಡಿರುವುದಿಲ್ಲ ಎಂಬುದನ್ನು ಲೆಕ್ಕಪರಿಶೋಧಕರು ಪತ್ತೆ ಹಚ್ಚಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X