ಬಂಟ್ವಾಳ: ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು

ಬಂಟ್ವಾಳ,ಎ.26 : ಕೂಲಿ ಕಾರ್ಮಿಕನೊರ್ವ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ವರದಿಯಾಗಿದೆ.
ವಾಮದಪದವು ಅಜ್ಜಿಬೆಟ್ಟು ಗ್ರಾಮದ ಪಾಲೇದಡಿ ನಿವಾಸಿ ವಾಸು ಪೂಜಾರಿ (52) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.
ಪಾಲೇದಡಿಯ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೆರೆಗೆ ಬಿದ್ದ ತಕ್ಷಣ ಇತರ ಕೆಲಸಗಾರರು ಮನೆಯವರಿಗೆ ತಿಳಿಸಿದ್ದು ಸ್ಥಳೀಯರು ಕೆರೆಯಿಂದ ಇವರನ್ನು ಮೇಲಕ್ಕೆತ್ತಿ ಬದುಕಿಸುವ ಪ್ರಯತ್ನ ಮಾಡಿದ್ದಾರಾದರೂ ಆದಾಗಲೇ ಮೃತರಾಗಿದ್ದಾರೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





