ವಿಜಯಪುರ: ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆ
ತಡವಾಗಿ ಬೆಳಕಿಗೆ ಬಂದ ಪ್ರಕರಣ

ತಡವಾಗಿ ಬೆಳಕಿಗೆ ಬಂದ ಪ್ರಕರಣ
ವಿಜಯಪುರ: ವಿವಾಹಿತೆ ಮಹಿಳೆಯೊಬ್ಬರು ಲೈವ್ ವಿಡಿಯೋ ಮಾಡಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಎ.15ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸುಹಾನ್ ಸೋನಾರ್ (21) ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ ಮಹಿಳೆ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಮಾಡಿದ್ದ ವಿಡಿಯೋದಲ್ಲಿ ಆತ್ಮಹತ್ಯೆಗೆ ಕಾರಣ ತಿಳಿಸಿದ್ದಾರೆ.
"ಪ್ರಿಯಕರ ಅಲ್ತಾಫ್ ಸುಲೈಮಾನ್ ಕಿರುಕುಳು ನೀಡುತ್ತಿದ್ದ, ಆತನೊಂದಿಗಿದ್ದ ನನ್ನ ಫೋಟೋವನ್ನು ನನ್ನ ಪತಿಗೆ ತೋರಿಸುತ್ತೇನೆ ಎಂದು ಬೆದರಿಕೆವೊಡ್ಡುತ್ತಿದ್ದ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ತಾಫ್ನೊಂದಿಗೆ ಯೂನುಸ್ ಹಾಗೂ ದಸ್ತಗಿರಸಾಬ್ ಮುಳವಾಡ ಎಂಬುವವರ ಹೆಸರನ್ನೂ ಕೂಡ ಸುಹಾನ ವಿಡಿಯೋದಲ್ಲಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





