Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀಸಲಾತಿ ಪ್ರಮಾಣ ಶೇ.75ಕ್ಕೆ ಹೆಚ್ಚಿಸಿ...

ಮೀಸಲಾತಿ ಪ್ರಮಾಣ ಶೇ.75ಕ್ಕೆ ಹೆಚ್ಚಿಸಿ ಒಕ್ಕಲಿಗ-ಲಿಂಗಾಯತರಿಗೆ ಹೆಚ್ಚು ಮೀಸಲಾತಿ ನೀಡುತ್ತೇವೆ: ಸಿದ್ದರಾಮಯ್ಯ ಭರವಸೆ

26 April 2023 5:47 PM IST
share
ಮೀಸಲಾತಿ ಪ್ರಮಾಣ ಶೇ.75ಕ್ಕೆ ಹೆಚ್ಚಿಸಿ ಒಕ್ಕಲಿಗ-ಲಿಂಗಾಯತರಿಗೆ ಹೆಚ್ಚು ಮೀಸಲಾತಿ ನೀಡುತ್ತೇವೆ: ಸಿದ್ದರಾಮಯ್ಯ ಭರವಸೆ

ಬೆಂಗಳೂರು, ಎ. 26: ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.75ಕ್ಕೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುತ್ತೇವೆ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಅಮಿತ್ ಶಾ ಹೇಳಿಕೆಯೇ ಜಾತಿ-ಜಾತಿ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆಯದ್ದು. ಇದನ್ನು ಕರ್ನಾಟಕ ರಾಜ್ಯದ ಜನತೆ ಅರ್ಥಮಾಡಿಕೊಳ್ಳದಷ್ಟು ದಡ್ಡರಲ್ಲ. ಒಕ್ಕಲಿಗರು ಮತ್ತು ಲಿಂಗಾಯತರು ಸೇರಿದಂತೆ ಈ ರಾಜ್ಯದ ಜನತೆ ‘ಕಿತ್ತು ತಿನ್ನುವ ದುಷ್ಟರಲ್ಲ, ಹಂಚಿ ತಿನ್ನುವ ಔದಾರ್ಯ ಸಜ್ಜನರು’ ಎನ್ನುವುದನ್ನು ಅಮಿತ್ ಶಾ ಅರಿಯಬೇಕು’ ಎಂದು ತಿರುಗೇಟು ನೀಡಿದ್ದಾರೆ.

‘ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೆ ಮೀಸಲಾತಿಯ ಗೊಂದಲ ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇ.50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ’ ಎಂದು ಅವರು ತಿಳಿಸಿದ್ದಾರೆ.

‘ಈಗಾಗಲೇ ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿ ಶೇ.50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿ ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ 9ನೆ ಶೆಡ್ಯೂಲ್‍ಗೆ ಸೇರಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಮೀಸಲಾತಿ ಪರಿಷ್ಕರಣೆಗೆ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಅನುಕೂಲ ಇದೆ. ಯಾಕೆಂದರೆ ನಮ್ಮಲ್ಲಿ  ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ-ಮನೆಗೆ ತೆರಳಿ ವೈಜ್ಞಾನಿಕ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧವಿದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ ಎಂದು ಹೇಳಿದ್ದಾರೆ.

‘ವೀರಪ್ಪ ಮೊಯಿಲಿ ಸರಕಾರ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.73ಕ್ಕೆ ಹೆಚ್ಚಿಸಿ ಆದೇಶ ಮಾಡಿತ್ತು. ಅದಿನ್ನು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಅಲ್ಲಿಯೂ ರಾಜ್ಯ ಸರಕಾರ ಜಾತಿಗಣತಿಯ ವರದಿಯನ್ನು ಮುಂದಿಟ್ಟು ಮೀಸಲಾತಿ ಹೆಚ್ಚಳಕ್ಕೆ ಅನುಮತಿ ಕೋರಿದರೆ ನ್ಯಾಯಾಲಯ ಖಂಡಿತ ಒಪ್ಪಿಗೆ ನೀಡಬಹುದು. ಸಾಮಾಜಿಕ ಅನ್ಯಾಯವನ್ನೇ ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡು ಬಂದ ಬಿಜೆಪಿಗೆ, ಅದರ ಅಧ್ಯಕ್ಷರಿಗೆ ಸಾಮಾಜಿಕ ನ್ಯಾಯ ಅರ್ಥವಾಗಲಾರದು. ನಮ್ಮದು ಕೋಮುವಾದ ಉಸಿರಾಡುವ ಗುಜರಾತ್ ಅಲ್ಲ, ಬಸವವಾದ ಮೈಗೂಡಿಸಿಕೊಂಡಿರುವ ಕರ್ನಾಟಕ ಎನ್ನುವುದನ್ನು ನೆನಪಿಸಬಯಸುತ್ತೇನೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ಸಾಧನೆಯ ಬಲದಿಂದಾಗಲಿ, ಸವಕಲುಗೊಂಡಿರುವ ಕೋಮುವಾದದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಈ ಅಡ್ಡಕಸುಬಿ ಮೀಸಲಾತಿ ನೀತಿಯನ್ನು ರಾಜ್ಯ ಸರಕಾರ ಘೋಷಿಸಿತ್ತು. ಈ ಮೀಸಲಾತಿಯನ್ನು ಒಕ್ಕಲಿಗ ಇಲ್ಲವೇ ಲಿಂಗಾಯತರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಮುಸ್ಲಿಮ್ ಮತ್ತು ಒಕ್ಕಲಿಗ-ಲಿಂಗಾಯತರ ನಡುವೆ ದ್ವೇಷ ಹುಟ್ಟಿಸುವುದೇ ಆಗಿದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

‘ಅಮಿತ್ ಶಾ ಅವರ ಪ್ರಶ್ನೆಯಲ್ಲಿಯೇ ಬಿಜೆಪಿಯ ದುಷ್ಟ ಆಲೋಚನೆ ಸ್ಪಷ್ಟ. ಆದರೆ, ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟಿರುವ ಮುಸ್ಲಿಮರು ಮೀಸಲಾತಿ ರದ್ದತಿಯಿಂದ ಅಧೀರರಾಗಲಿಲ್ಲ, ಪ್ರಚೋದನೆಗೂ ಒಳಗಾಗಲಿಲ್ಲ. ಅದೇ ರೀತಿ ಇದು ಕನ್ನಡಿಯೊಳಗಿನ ಗಂಟು ಎನ್ನುವುದನ್ನು ಅರ್ಥಮಾಡಿಕೊಂಡಿರುವ ಜಾಗೃತ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಹೊಸ ಮೀಸಲಾತಿ ಘೋಷಣೆಯಿಂದ ಸಂಭ್ರಮಗೊಳ್ಳಲಿಲ್ಲ. ಇದು ನಮ್ಮ ಕರ್ನಾಟಕ’ ಎಂದು ಅವರು ತಿಳಿಸಿದ್ದಾರೆ.

‘ಗುಜರಾತ್ ಮಾದರಿ’ ನಡೆಯುವುದಿಲ್ಲ: ‘ಇದೀಗ ನಿರೀಕ್ಷೆಯಂತೆ ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಹೊಸ ಮೀಸಲಾತಿಯನ್ನು ಜಾರಿಗೆ ತರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಭರವಸೆ ನೀಡಿರುವ ಕೇಂದ್ರ ಸರಕಾರದ ಗೃಹಸಚಿವರು ಚುನಾವಣಾ ಭಾಷಣದಲ್ಲಿ ಅದರ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು’

-ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ

share
Next Story
X