Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರ ಪ್ರದೇಶದಲ್ಲಿ ಕಳೆದ 6 ವರ್ಷಗಳಲ್ಲಿ...

ಉತ್ತರ ಪ್ರದೇಶದಲ್ಲಿ ಕಳೆದ 6 ವರ್ಷಗಳಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ: ಮಂಡ್ಯದಲ್ಲಿ ಆದಿತ್ಯನಾಥ್

''ರಾಜ್ಯದ ಪ್ರಗತಿಗೆ ಬಿಜೆಪಿ ಬೆಂಬಲಿಸಿ''

26 April 2023 6:57 PM IST
share
ಉತ್ತರ ಪ್ರದೇಶದಲ್ಲಿ ಕಳೆದ 6 ವರ್ಷಗಳಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ: ಮಂಡ್ಯದಲ್ಲಿ ಆದಿತ್ಯನಾಥ್
''ರಾಜ್ಯದ ಪ್ರಗತಿಗೆ ಬಿಜೆಪಿ ಬೆಂಬಲಿಸಿ''

ಮಂಡ್ಯ, ಎ.26 : ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಬುಧವಾರ ಮಂಡ್ಯ ನಗರದಲ್ಲಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಪರ ಮತಯಾಚಿಸಿದರು.

ಮೈಸೂರಿನಿಂದ ಮಂಡ್ಯದ ಪಿಇಎಸ್ ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ಅಲ್ಲಿಂದ ಕಾರಿನಲ್ಲಿ ನಗರದ ಸಂಜಯ್ ವೃತ್ತಕ್ಕೆ ಬಂದು  ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಿಲ್ವರ್ ಜ್ಯೂಬಿಲಿ ಪಾರ್ಕಿನವರೆಗೆ ಪ್ರಚಾರ ವಾಹನದಲ್ಲಿ ರೋಡ್ ಶೋ ನಡೆಸಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಆಯೋಜಿಸಿದ್ದ ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 'ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರದಿಂದ ಭಾರತ ವಿಶ್ವದಲ್ಲಿ ಗುರುತಿಸಿಕೊಳ್ಳುವಂತಾಗಿದೆ' ಎಂದರು.

'ಡಬಲ್ ಇಂಜಿನ್ ಸರಕಾರದಿಂದಾಗಿ ಉತ್ತರ ಪ್ರದೇಶದಲ್ಲಿ ಕಳೆದ ಆರು ವರ್ಷಗಳಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ. ಈ ಡಬಲ್ ಇಂಜಿನ್ ಸರಕಾರದಿಂದ ಉತ್ತರ ಪ್ರದೇಶದಲ್ಲಿ ಆಗಿರುವ ಅಭಿವೃದ್ಧಿಯಂತೆ ಕರ್ನಾಟಕದಲ್ಲೂ ಆಗಿದೆ. ಮತ್ತಷ್ಟು ಅಭಿವೃದ್ಧಿಯನ್ನು ಕೈಗೊಳ್ಳಲು ಈ ಬಾರಿಯೂ ಬಿಜೆಪಿಯನ್ನು ರಾಜ್ಯದ ಜನತೆ ಅತ್ಯಂತ ಬಹುಮತದಿಂದ ಗೆಲ್ಲಿಸಬೇಕು' ಎಂದು ಮನವಿ ಮಾಡಿದರು.

ಉತ್ತರ ಪ್ರದೇಶ ಮತ್ತು ಕರ್ನಾಟಕ ರಾಜ್ಯದ ನಡುವೆ ತೇತ್ರಾಯುಗದಿಂದಲೂ ಅವಿನಾಭಾವ ಸಂಬಂಧವಿದೆ. ಏಕೆಂದರೆ, ಶ್ರೀರಾಮನ ಜನ್ಮಸ್ಥಳ ಉತ್ತರ ಪ್ರದೇಶವಾದರೆ, ಅವನ ಭಂಟ ಆಂಜನೇಯ ಕರ್ನಾಟಕದಲ್ಲಿ ಜನಿಸಿದವರು. ಇದಲ್ಲದೆ ನಾಥ ಪರಂಪರೆಯ ಆದಿಚುಂಚನಗಿರಿಗೂ ಉತ್ತರ ಪ್ರದೇಶಕ್ಕೂ ಸಂಬಂಧವಿದೆ ಎಂದು ಅವರು ಹೇಳಿದರು.

ಭಾರತವನ್ನು 1947 ರಲ್ಲಿ ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಯಿತು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾವು ಮತ್ತೊಂದು ವಿಭಜನೆಗೆ ಅವಕಾಶ ಕೊಡುವುದಿಲ್ಲ. ಹಾಗೆಯೇ ಧರ್ಮಾಧಾರಿತ ಮೀಸಲಾಯಿತಿಯು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದರು.

ಮಂಡ್ಯದ ಅಭಿವೃದ್ಧಿಗೆ ಈ ಬಾರಿ ಏಳು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಜನತೆಯಲ್ಲಿ ಅವರು ಮನವಿ ಮಾಡಿದರು.

share
Next Story
X